ಬೆಂಗಳೂರು:- ಮಾದಕವಸ್ತುಗಳ ನಿಯಂತ್ರಣವೇ ಸರ್ಕಾರದ ಗುರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪಾಪದ ಕೆಲಸ ಮಾಡುವುದಕ್ಕೆ ಹೆದರಬೇಕಿತ್ತು: ದರ್ಶನ್ ಕೇಸ್ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು!
ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದರು.
ಯುವಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು ಬಳಕೆಯನ್ನು ಮಾಡುವುದಿಲ್ಲ, ಮಾಡಲೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಇಂದು ಪ್ರತಿಜ್ಞೆ ಕೈಗೊಂಡಿದ್ದಾರೆ. ಈ ಪ್ರತಿಜ್ಞೆಯನ್ನು ಅಕ್ಷರಶ: ಪಾಲಿಸುವ ಕರ್ತವ್ಯವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದರು
ವಿಶ್ವ ಆರೋಗ್ಯ ಸಂಸ್ಥೆಯವರ ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೆ ಈಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಬದಲು ಈ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ. ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಯುವಜನತೆ ತಂಬಾಕು ಸೇವನೆ ಹಾಗೂ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಬಾರದು ಎಂದು ಹೇಳಿದರು.