ಬೆಂಗಳೂರು:- ಬೆಂಗಳೂರು ಗ್ರಾಮಾಂತರ ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಆರ್ ಅಶೋಕ್ ಕಿಡಿಕಾರಿದ್ದಾರೆ.
ಡಾ. ಸಿಎನ್ ಮಂಜುನಾಥ್ ಪರ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Breaking News: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಸೇರ್ಪಡೆ!
ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅಶೋಕ್, ಡಿಕೆ ಸಹೋದರರು ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ಟೀಕಿಸಿದ್ದಾರೆ.
ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರೆಂಟಿ ಆಗುತ್ತಿದ್ದಂತೆ, ಶಾಶ್ವತವಾಗಿ CM-in-waiting ಆಗಿ ಉಳಿಯಬೇಕಾಗುತ್ತದಲ್ಲಾ ಎನ್ನುವ ಹತಾಶೆಯಿಂದ ಕಂಗಾಲಾಗಿರುವ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ. ಬಿಜೆಪಿ ಕಾರ್ಯಕರ್ತ ಸಹೋದರ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಕಾಟಾಚಾರಕ್ಕೆ ಕೇಸ್ ಹಾಕುವ ಮೂಲಕ ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಸಿಎಂ ಸಿದ್ದರಾಮಯ್ಯನವರೇ? ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಳ್ಳುವ ನೀವು ಡಿಕೆ ಸಹೋದರದ ಮುಂದೆ ಅಷ್ಟೊಂದು ವೀಕ್ ಯಾಕಾಗಿದ್ದೀರಿ’ ಎಂದು ಅಶೋಕ್ ಪ್ರಶ್ನಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರು ನಿರ್ಭೀತಿಯಿಂದ ಮತದಾನ ಮಾಡುವ ವಾತಾವರಣ ಕೆಡಿಸಿ ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುವ ಈ ದುಷ್ಕೃತ್ಯಕ್ಕೆ ಚುನಾವಣಾ ಆಯೋಗ ಕಡಿವಾಣ ಹಾಕಬೇಕು ಎಂದರು.