ನವದೆಹಲಿ: ರಾಜ್ಯದಲ್ಲಿ ಬೆಂಬಲ ಬೆಲೆಯೊಂದಿಗೆ ಹೆಚ್ಚುವರಿ ಹೆಸರು ಕಾಳು ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ರೈತರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಹೆಚ್ಚುವರಿ ಖರೀದಿಗೆ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.
ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಈಗಾಗಲೇ 22,215 ಮೆಟ್ರಿಕ್ ಟನ್ ಹೆಸರುಕಾಳು ಖರೀದಿಸಿದೆ. ರಾಜ್ಯದಲ್ಲಿ ಹೆಸರು ಕಾಳು ಹೆಚ್ಚುವರಿಯಾಗಿ ಬೆಳೆದಿರುವ ಹಿನ್ನೆಲೆ ಸರ್ಕಾರದಿಂದ ಖರೀದಿಗೆ ರೈತರು ಮನವಿ ಮಾಡಿದ್ದರು. ಈ ಹಿನ್ನೆಲೆ 16,105 ಮೆಟ್ರಿಕ್ ಟನ್ ಹೆಚ್ಚುವರಿಯಾಗಿ ಖರೀದಿಸಲು ಕೃಷಿ ಸಚಿವರ ಜೊತೆಗೆ ಮಾತುಕತೆ ನಡೆಸಲಾಗಿತ್ತು.
ಏನೇ ಮಾಡಿದ್ರೂ ಚಪಾತಿ ಮೃದುವಾಗಿ ಬರ್ತಿಲ್ವಾ: ಹಿಟ್ಟು ನಾದುವಾಗ, ಚಪಾತಿ ಮಾಡುವಾಗ ಈ ಟಿಪ್ಸ್ ಫಾಲೋ ಮಾಡಿ
ಮನವಿ ಮೇರೆಗೆ ಕೃಷಿ ಸಚಿವಾಲಯವೂ ಅನುಮತಿ ನೀಡಿದ್ದು, ಸರ್ಕಾರದ ಈ ನಿರ್ಧಾರದಿಂದಾಗಿ ಈ ಬಾರಿ ಒಟ್ಟು 38,320 ಮೆಟ್ರಿಕ್ ಟನ್ ಬೆಂಬಲ ಬೆಲೆ ಅಡಿಯಲ್ಲಿ ಖರೀದಿಗೆ ಅನುಮತಿ ನೀಡಿದಂತಾಗಲಿದೆ. ಶೀಘ್ರದಲ್ಲಿ ಎಫ್ಎಕ್ಯೂ ಗುಣಮಟ್ಟದಲ್ಲಿ ಕೇಂದ್ರದ ಸಂಸ್ಥೆಗಳು ಹೆಸರು ಕಾಳು ಖರೀದಿ ಮಾಡಲಿದೆ ಎಂದು ವಿವರಿಸಿದರು.