ಬೆಂಗಳೂರು: ಹೊಸ ವರ್ಷದ ಮೊದಲ ದಿನವೇ ಬಿಎಂಟಿಸಿಗೆ 4 ಕೋಟಿ 37 ಲಕ್ಷದ 70 ಸಾವಿರ ಆದಾಯ ಬಂದಿದೆ.
ವರ್ಷದ ಮೊದಲ ದಿನವಾದ ಸೋಮವಾರ ಬಿಎಂಟಿಸಿಯಲ್ಲಿ 27 ಲಕ್ಷದ 9 ಸಾವಿರದ 659 ಮಂದಿ ಪ್ರಯಾಣಿಕರು ಸಂಚರಿಸಿದ್ದಾರೆ. ಹೊಸ ವರ್ಷದ ಆಚರಣೆಯಲ್ಲಿ ಭಾಗಿಯಾಗಿದ್ದವರಿಗೆ ಬಿಎಂಟಿಸಿ ಹೆಚ್ಚುವರಿ ಬಸ್ ಓಡಿಸಿತ್ತು. ನ್ಯೂ ಇಯರ್ ವೆಲ್ಕಮ್ಗೆ ಬೆಂಗಳೂರಿನ ವಿವಿಧೆಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪ್ರಯಾಣಿಕರ ಅನುಕೂಲಕ್ಕೆ ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಹೆಚ್ಚುವರಿ ಬಸ್ ಸೇವೆ ಇತ್ತು.
Namma Metro: ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮೆಟ್ರೋ ಟ್ರ್ಯಾಕ್ ಗೆ ಜಿಗಿದ ಮಹಿಳೆ: ಮುಂದೇನಾಯ್ತು..?
ನಗರದ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಇಂದಿರಾನಗರ, ಕೋರಮಂಗಲ, ಶಾಂತಿನಗರ, ಯಲಹಂಕ ಸೇರಿ ಹಲವು ನಿಲ್ದಾಣದಿಂದ ಬಸ್ ಸೇವೆಯನ್ನು ಬಿಎಂಟಿಸಿ ಕಲ್ಪಿಸಿತ್ತು. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್ಗಳ ಸೇವೆ ನಿಯೋಜಿಸಿದ ಪರಿಣಾಮ ಬಿಎಂಟಿಸಿ ಒಂದೇ ದಿನದಲ್ಲಿ4.37 ಕೋಟಿ ರೂ.ಆದಾಯಗಳಿಸಿದೆ.