ರೈಲ್ವೆ ಇಲಾಖೆಯಲ್ಲಿ ಕೆಲಸ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿದಂತೆ ಕೆಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ವಿಶೇಷ ಅಂದರೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಗರಿಷ್ಠ ತಿಂಗಳ ವೇತನ 2 ಲಕ್ಷ ರೂಪಾಯಿ. ನವೆಂಬರ್ 6 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.
IRCTC ವಿಭಾಗದಲ್ಲಿನ ರೈಲ್ವೇ ಉದ್ಯೋಗವಕಾಶದ ವಿವರ ಇಲ್ಲಿದೆ
IRCTC ಹೊರಡಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಅರ್ಹತೆ, ವಯಸ್ಸಿನ ಮಿತಿ, ವೇತನ ಸೇರಿದಂತೆ ಎಲ್ಲಾ ಮಾಹಿತಿ ಲಭ್ಯವಿದೆ. ಸದ್ಯ ನೇಮಕಾತಿ ವಯಸ್ಸಿನ ಮಿತಿ ಗರಿಷ್ಠ 55 ವರ್ಷ. ನವೆಂಬರ್ 6, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಲಿಖಿತ ಪರೀಕ್ಷೆ ಇಲ್ಲದಿರುವ ಕಾರಣ ಸಂದರ್ಶನದ ಮೂಲಕ ಸೂಕ್ತರನ್ನು ಇಲಾಖೆ ಆಯ್ಕೆ ಮಾಡಲಿದೆ. IRCTC ಅಧಿಕೃತ ವೆಬ್ಸೈಟ್ನಲ್ಲಿ ಉದ್ಯೋಗ ನೇಮಕಾತಿ ಮಾಹಿತಿ ನೀಡಲಾಗಿದೆ. ಇಷ್ಟೇ ಅಲ್ಲ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿನಂತಿಸಲಾಗಿದೆ.
ಪ್ರತಿರಾತ್ರಿ ಮೊಸರು ತಿನ್ನುತ್ತಿದ್ರೆ, ಇಂದಿನಿಂದ ಆ ಅಭ್ಯಾಸ ಬಿಟ್ಬಿಡಿ: ಆಯುರ್ವೇದ ತಜ್ಞರ ಸಲಹೆ ಹೀಗಿದೆ
IRCTC ಉದ್ಯೋಗದ ವೇತನ ವಿವರ
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ತಿಂಗಳಿಗ 15,600 ರೂಪಾಯಿಂದ ಗರಿಷ್ಠ 39,100 ರೂಪಾಯಿವರೆಗೆ ನಿಗದಿಪಡಿಸಲಾಗಿದೆ. ಇನ್ನು ಡೆಪ್ಯೂಟಿ ಜನರಲ್ ಮ್ಯಾನೇಜರ್ (ಫೈನಾನ್ಸ್) ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 70,000 ರೂಪಾಯಿಂದ 2 ಲಕ್ಷ ರೂಪಾಯಿವರೆಗೆ ಸಂಬಳ ನಿಗಧಿಪಡಿಸಲಾಗಿದೆ.
ಅರ್ಹ ಹಾಗೂ ಸೂಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ, ವಿದ್ಯಾರ್ಹತೆ ದಾಖಲೆ ಸೇರಿಂತೆ ಇತರ ದಾಖಲೆಗಳ ಪತ್ರಗಳನ್ನು ಲಗತ್ತಿಸಿ ಆನ್ಲೈನ್ ಮೂಲಕ ಅಥವಾ IRCTC ಇಮೇಲ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ದಾಖಲೆ, ವಿವರ, ಪ್ರಮಾಣಪತ್ರಗಳ ಪರಿಶೀಲಿಸಿದ ಬಳಿಕ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಇಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ. ಸಂದರ್ಶನದ ಮೂಲಕ ಸೂಕ್ತ ಹಾಗೂ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರಿ ಸಂಸ್ಥೆಯ ಹುದ್ದೆಗೆ ಭಾರಿ ಬೇಡಿಕೆ ಇದೆ. ಈಗಾಗಲೇ IRCTC ಉದ್ಯೋಗಕ್ಕೆ ಹಲವರು ಅರ್ಜಿ ಸಲ್ಲಿಸಿದ್ದಾರೆ. ವೇತನ ಜೊತೆಗೆ ಇತರ ಕೇಂದ್ರ ಸರ್ಕಾರಿ ನೌಕರರಿಗೆ ಇರುವ ಸೌಲಭ್ಯಗಳು ಸಿಗಲಿದೆ.