ಕಲಬುರಗಿ: ಬಸ್-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿಯ ಕಟ್ಟಿ ಸಂಗಾವಿ ಬಳಿ ಅಪಘಾತ ನಡೆದಿದೆ. ಶಶಿಕುಮಾರ್ (21), ಪ್ರಜ್ವಲ್ (22) ಮೃತ ದುರ್ದೈವಿಗಳಾಗಿದ್ದು,. ಸ್ನೇಹಿತರೊಬ್ಬರ ಬರ್ತ್ ಡೇ ಪಾರ್ಟಿಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಸಾರಿಗೆ ಬಸ್ಗೆ ಬೈಕ್ಗೆ ಮುಖಾಮುಖಿ ಡಿಕ್ಕಿಯಾಗಿದೆ.
Most Visited Websites: ಭಾರತೀಯರು ಅತಿ ಹೆಚ್ಚು ಭೇಟಿ ನೀಡಿದ ವೆಬ್ ಸೈಟ್ಗಳು ಯಾವುದು ಗೊತ್ತಾ?
ಗಂಭೀರ ಗಾಯಗೊಂಡಿದ್ದ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಜೇವರ್ಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಜೇವರ್ಗಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.