ಬೆಂಗಳೂರು: ಕಳೆದ ಒಂದು ವಾರದಿಂದ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪಾರ ತೆರವು ಕಾರ್ಯಾಚರಣೆ ಮುಂದುವರೆದಿದೆ. ಈ ಬಿಸಿ ಈಗ ಮಲ್ಲೇಶ್ವರಂ ಮಾರ್ಕೆಟ್ಗೂ (Malleshwaram Market) ತಟ್ಟಿದ್ದು, ಬೀದಿಬದಿ ವ್ಯಾಪಾರಿಗಳ (Street Vendors) ಗೋಳು ಹೇಳತೀರದಂತಿದೆ
ಬೆಂಗಳೂರಿನಲ್ಲಿ (Bengaluru) ಕಳೆದ ಒಂದು ವಾರದಿಂದ ಬಿಬಿಎಂಪಿ ಅಧಿಕಾರಿಗಳಿಂದ ನಡೆಯುತ್ತಿರುವ ಬೀದಿಬದಿ ವ್ಯಾಪಾರ ತೆರವು ಕಾರ್ಯಾಚರಣೆ ಮಲ್ಲೇಶ್ವರಂ ಮಾರ್ಕೆಟ್ಗೂ ಕಾಲಿಟ್ಟಿದೆ. ಮಲ್ಲೇಶ್ವರಂ 8ನೇ ಕ್ರಾಸ್ನಲ್ಲಿ ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಿಗಳನ್ನು ವ್ಯಾಪಾರ ಮಾಡದಂತೆ ಅಂಗಡಿಗಳನ್ನು ಎತ್ತಿಸಲಾಗಿದ್ದು, ವ್ಯಾಪಾರಿಗಳು ಸರ್ಕಾರ ಮತ್ತು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಬೇರೆ ಬೇರೆ ಕಡೆ ಫುಟ್ಪಾತ್ ಮೇಲೆ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳ ತೆರವು ಆರಂಭಿಸಿರುವ ಬಿಬಿಎಂಪಿ ಬುಧವಾರ ಸಂಜೆ ದಿಢೀರ್ ಅಂತಾ ಮಲ್ಲೇಶ್ವರಂ 8ನೇ ಕ್ರಾಸ್ನ ಮಾರ್ಕೆಟ್ನಲ್ಲೂ ಕಾರ್ಯಚರಣೆ ಆರಂಭಿಸಿತ್ತು. ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಿಗಳನ್ನು ಪೊಲೀಸರು ಮತ್ತು ಮಾರ್ಷಲ್ಗಳ ಸಹಾಯದಿಂದ ತೆರವು ಮಾಡಲಾಯಿತು. ಆರಂಭದಲ್ಲಿ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದರು. ಆದರೆ ಪೊಲೀಸರು ದೊಡ್ಡ ಮಟ್ಟದ ವಿರೋಧಕ್ಕೆ ಆಸ್ಪದ ನೀಡದೆ ಸಂಪೂರ್ಣ ವ್ಯಾಪಾರವನ್ನು ಸ್ಥಗಿತಗೊಳಿಸಿದರು. ಇದೇ ಸಂದರ್ಭದಲ್ಲಿ ಮಹಿಳಾ ವ್ಯಾಪಾರಿಗಳು ಕೂಡ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿದರು.