ಬೆಂಗಳೂರು:- ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟಿ ಕೋಟಿ ವಂಚಿಸಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚೈತ್ರಾ ಬಿಡುಗಡೆ ಆಗಿದ್ದಾರೆ. ಚೈತ್ರಾ ಅವರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಡಿಸೆಂಬರ್ 4ರಂದು ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಚೈತ್ರಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಐದು ಕೋಟಿ ರೂ. ಹಣ ಪಡೆದು ಚೈತ್ರಾ ವಂಚಿಸಿದ್ದರು. ಈ ಬಗ್ಗೆ ಉದ್ಯಮಿ ದೂರು ನೀಡಿದ್ದರು. ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ಸಿಸಿಬಿ ಪೊಲೀಸರು ಪ್ರಕರಣದ ಆರೋಪಿಗಳಾದ ಹಿಂದೂಪರ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಹಾಗೂ ಶ್ರೀಕಾಂತ್ ಅವರನ್ನು ಸೆಪ್ಟೆಂಬರ್ 13 ರಂದು ಬಂಧಿಸಿದ್ದರು.