ಬೆಳಗಾವಿ:- 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಜಯ ಮೃತ್ಯುಂಜಯ ಶ್ರೀ ಹೇಳಿದ್ದಾರೆ.
ಕೋಲಾರ ಅಂಗಾಂಗ, ದೇಹದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕ ಮೆರೆದ ವೈದ್ಯ ಕುಟುಬ!
ಈ ಸಂಬಂಧ ಮಾತನಾಡಿದ ಅವರು, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ 12 ಮಂದಿ ಪೊಲೀಸರು ಹಾಗೂ 6 ಮಂದಿ ಹೋರಾಟಗಾರರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಹೇಳಿದರು. ಪಂಚಮಸಾಲಿ ಹೋರಾಟ ಶಾಂತಿಯುತವಾಗಿತ್ತು, ಸ್ಥಳಕ್ಕೆ ಸಿಎಂ ಬರಬೇಕು ಅಂತಾ ಆಗ್ರಹ ಇತ್ತು. ಆದ್ರೆ ಸ್ಥಳಕ್ಕೆ ಬಂದ ಸಚಿವರ ಮಾತು ಸಮಾಧಾನ ತರಲಿಲ್ಲ. ಹಾಗಾಗಿ ನಾವು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹೋರಟಿದ್ವಿ. ಆದ್ರೆ ಅಲ್ಲಿದ್ದ ಎಡಿಜಿಪಿ, ಕಮಿಷನರ್ ಕುತಂತ್ರದಿಂದ ಲಾಠಿ ಚಾರ್ಜ್ ಮಾಡಿದರು. ಲಾಠಿ ಚಾರ್ಜ್ನಿಂದ ಬಹಳಷ್ಟು ಜನರಿಗೆ ಕೈಕಾಲು ಮುರಿದಿದೆ. ಮುಖ್ಯಮಂತ್ರಿಗಳೇ ಹೇಳಿ ಇದನ್ನು ಮಾಡಿಸಿದ್ದಾರಾ ಅನ್ನೋ ಅನುಮಾನ ಇದೆ ಎಂದು ಕಳವಳ ವ್ಯಕ್ತಪಡಿಸಿದರು