ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನ.13 ರಂದು ಉಪಚುನಾವಣೆ ನಡೆಯಲಿದೆ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿಗೆಗೆ ನ.13 ರಂದು ಉಪಚುನಾವಣೆ ನಡೆಯಲಿದ್ದರೆ ನ.23 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ರಾಜ್ಯದಲ್ಲಿ ನವೆಂಬರ್ 13ಕ್ಕೆ ಬೈ ಎಲೆಕ್ಷನ್ ನಡೆಯಲಿದ್ದು ನವೆಂಬರ್ 13ಕ್ಕೆ ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆಚನ್ನಪಟ್ಟಣ, ಸಂಡೂರು, ಶಿಗ್ಗಾಂವಿಗೆ ಬೈ ಎಲೆಕ್ಷನ್ ಪ್ರಕಟ
ನವೆಂಬರ್ 23ಕ್ಕೆ ಮೂರೂ ಕ್ಷೇತ್ರಗಳ ಉಪಚುನವಣಾ ಫಲಿತಾಂಶ ಹಾಗೆ ಅಕ್ಟೋಬರ್ 18ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನ ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 30 ಲಾಸ್ಟ್ ದಿನ
ಚನ್ನಪಟ್ಟಣದಿಂದ ಜೆಡಿಎಸ್ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಗೆದ್ದು ಕೇಂದ್ರದಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ.
ಸಂಡೂರು ಕಾಂಗ್ರೆಸ್ ಶಾಸಕರಾಗಿದ್ದ ಈ ತುಕಾರಾಂ ಅವರು ಬಳ್ಳಾರಿಯಿಂದ ಗೆದ್ದಿದ್ದರಿಂದ ಸಂಡೂರು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.