ಮಂಗಳೂರು: ಲೋಕಸಭೆ ಚುನಾವಣೆ ವೇಳೆಗೆ ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಪಕ್ಷ ಖಾಲಿಯಾಗಲಿದ್ದು, ಆಗ ಕಾರ್ಯಕರ್ತರ ರಕ್ಷಣೆಗೆ ಯಾರೇ ನಾಯಕರು ಇರುವುದಿಲ್ಲ. ನಮ್ಮ ತತ್ವ ಸಿದ್ಧಾಂತ ಒಪ್ಪಿಕೊಂಡು ಯಾರು ಬೇಕಾದರೂ ಕಾಂಗ್ರೆಸ್ ಸೇರ್ಪಡೆಯಾಗಬಹುದು. ಬಿಜೆಪಿಯಲ್ಲಿ ನಾಯಕರೇ ಇಲ್ಲ ಎಂದು ನಮ್ಮ ನಾಯಕತ್ವ ಹುಡುಕಿಕೊಂಡು ಪಕ್ಷಕ್ಕೆ ಬರಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಜಯೇಂದ್ರ ಅವರಿಗೆ ಶುಭ ಹಾರೈಸುತ್ತೇನೆ. ಇದರಿಂದ ಕಾಂಗ್ರೆಸ್ ಮೇಲೆ ಪರಿಣಾಮ ಆಗುವುದು ನಿಜ. ಅದು ಸಕಾರಾತ್ಮಕ, ಒಳ್ಳೆಯ ಪರಿಣಾಮ. ವಿಜಯೇಂದ್ರ ಆಯ್ಕೆಯಲ್ಲಿ ಬಿಜೆಪಿಯೊಳಗಿನ ಅಸಮಾಧಾನ ಬಹಿರಂಗವಾಗಿದೆ. ಸಿ ಟಿ ರವಿ, ಯತ್ನಾಳ್, ಸುನಿಲ್ ಕುಮಾರ್ ಗೈರುಹಾಜರಾಗಿದ್ದಾರೆ. ಯಡಿಯೂರಪ್ಪ ಅವರನ್ನು ಸಿಎಂ ಗಾದಿಯಿಂದ ಕಣ್ಣೀರು ಹಾಕಿಸಿ ಇಳಿಸಿದ್ದು ಯಾಕೆ ಎಂದು ಇನ್ನೂ ಯಾರಿಗೂ ಗೊತ್ತಿಲ್ಲ. ಬಿಜೆಪಿಯಲ್ಲಿ ಹೊಂದಾಣಿಕೆ ಇಲ್ಲ. ನಾಯಕತ್ವದ ಕೊರತೆ ಕಾರಣಕ್ಕೆ ಬಿಜೆಪಿ ವರಿಷ್ಠರು ವಿಜಯೇಂದ್ರ ಆಯ್ಕೆ ಮಾಡಿದ್ದಾರೆ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)