ಬೆಂಗಳೂರು:- ಬಿಜೆಪಿಯ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಿವೈ ವಿಜಯೇಂದ್ರ ಅವರು ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಶ್ರೀಗಳನ್ನು ಭೇಟಿ ಮಾಡಿದ್ದಾರೆ.
ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿ ದೊಡ್ಡ ಜವಾಬ್ದಾರಿ ಹೊತ್ತ ಹಿನ್ನೆಲೆ, ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಇನ್ನೂ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಇದರ ಪರಿಣಾಮ MP ಎಲೆಕ್ಷನ್ ಮೇಲೆ ಬಿದ್ದರೂ ಅಚ್ಚರಿ ಇಲ್ಲ ಎಂದೇ ಹೇಳಲಾಗುತ್ತಿದೆ.