ಬೆಂಗಳೂರು:- ಸಿ.ಟಿ.ರವಿ ಹಾಗೂ ಪುತ್ರನಿಗೆ ಜೀವ ಬೆದರಿಕೆ ಬರುತ್ತಿದೆ ಎಂದು BY ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರು ನಾಗರೀಕರೇ ಗಮನಿಸಿ: ಸೋಮವಾರ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!
ಈ ಸಂಬಂಧ ಮಾತನಾಡಿದ ಅವರು, ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ. ಇಷ್ಟಾಗಿಯೂ ದುಷ್ಟ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ. ಏಕೆಂದರೆ ಅವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂಬುದು ಬಹಿರಂಗ ಸತ್ಯ ಎಂದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ಹೋಗುವ ಸಾಧ್ಯತೆ ಇದೆ. ಒಂದು ಕಡೆ ಸಿಐಡಿ ತನಿಖೆ ನಡುತ್ತಿದೆ. ಮತ್ತೊಂದೆಡೆ ಸಿ.ಟಿ.ರವಿ ಹಾಗೂ ಪುತ್ರನಿಗೆ ಅನಾಮಧೇಯ ವ್ಯಕ್ತಿಗಳಿಂದ ಜೀವ ಬೆದರಿಕೆ ಹಾಕ್ತಿದ್ದಾರಂತೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ ಎಂದಿದ್ದಾರೆ.