ಬೆಳಗಾವಿ: ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ವಿವಾದಾತ್ಮಕ ಹೇಳಿಕೆ ಕರ್ನಾಟಕ ವಿಧಾನಸಭೆಯಲ್ಲೂ ಗದ್ದಲಕ್ಕೆ ಕಾರಣವಾಯಿತು. ಇದರ ಬೆನ್ನಲ್ಲೇ ತನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿ ನಿಂದಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.
ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಪರಿಷತ್ನಲ್ಲಿ ಇಂದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಾತಿನ ಚಕಮಕಿ ನಡೆಯವಾಗ ನನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ.
Recruitment 2024: ಸುಪ್ರೀಂ ಕೋರ್ಟ್ʼನಲ್ಲಿದೆ ಉದ್ಯೋಗಾವಕಾಶ.! ಆಸಕ್ತರು ಇವತ್ತೇ ಅಪ್ಲೈ ಮಾಡಿ
ಸಭಾಪತಿ ಕಲಾಪ ಮುಂದೂಡಿದ ವೇಳೆ ಅ ಪದ ಬಳಕೆ ಮಾಡಿದ್ದಾರೆ. ಹತ್ತು ಬಾರಿ ಸಿಟಿ ರವಿ ಆ ಪದವನ್ನು ಬಳಕೆ ಮಾಡಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ದೂರಿದರು. ಹೆಬ್ಬಾಳ್ಕರ್ ಮಾತಿಗೆ ಕಾಂಗ್ರೆಸ್ ಸದಸ್ಯರು ಧ್ವನಿ ಗೂಡಿಸಿದರು. ನಂತರ ಸ್ಪೀಕರ್ ಹೊರಟ್ಟಿ ಕಚೇರಿಗೆ ತೆರಳಿದ ಲಕ್ಷ್ಮಿ ಹೆಬ್ಬಾಳ್ಕರ್ ಸಿಟಿ ರವಿ ಸದಸ್ಯತ್ವ ರದ್ದು ಮಾಡುವಂತೆ ದೂರು ನೀಡಿದರು. ಅದಲ್ಲದೆ ಅಶ್ಲೀಲ ಪದ ಬಳಕೆ ನೊಂದಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಭಾಪತಿ ಬಸವರಾಜ ಹೊರಟ್ಟಿ ಮುಂದೆ ಕಣ್ಣೀರಿಟ್ಟಿದ್ದಾರೆ ದೂರು ಸ್ವೀಕರಿಸಿದ ಸ್ಪೀಕರ್ ವಿಡಿಯೋ ಪರಿಶೀಲಿಸಿದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.