ನವದೆಹಲಿ: ದೇಶದಲ್ಲಿ ಅಲ್ಪಸಂಖ್ಯಾತರು ಅಥವಾ ಯಾವುದೇ ವ್ಯಕ್ತಿ ಭಯಪಡುವ ಅಗತ್ಯವಿಲ್ಲ. ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಸಿಎಎಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈಗಾಗಲೇ ಅನುಷ್ಠಾನಕ್ಕೆ ಬಂದಿರುವ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ಖಾಸಗಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಸಾರ್ವಭೌಮ ನಿರ್ಧಾರ. ನಾವು ಅದರಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಸಿಎಎ ಅನುಷ್ಠಾನ ಮಾಡಲು ರಾಜ್ಯಗಳು ನಿರಾಕರಿಸಲು ಸಾಧ್ಯವಿಲ್ಲ. ಪೌರತ್ವ ನೀಡುವ ಅಧಿಕಾರ ಕೇಂದ್ರ ಸರ್ಕಾರ ಮಾತ್ರ ಇದೆ ಎಂದು ಅವರು ಹೇಳಿದರು.
Breaking: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಬಿ ಎಸ್ ಯಡಿಯೂರಪ್ಪ ವಿರುದ್ಧ FIR!
ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಹಿಂದೂಗಳು, ಬೌದ್ಧರು, ಜೈನರು, ಸಿಖ್ಖರು, ಕ್ರಿಶ್ಚಿಯನ್ನರು ಮತ್ತು ಪಾರ್ಸಿ ನಿರಾಶ್ರಿತರಿಗೆ ಹಕ್ಕುಗಳು ಮತ್ತು ಪೌರತ್ವವನ್ನು ನೀಡುವುದು ಮಾತ್ರ ಸಿಎಎ ಉದ್ದೇಶ. ಸಿಎಎ ಮೂಲಕ ಬಿಜೆಪಿ ಹೊಸ ವೋಟ್ ಬ್ಯಾಂಕ್ ಸೃಷ್ಟಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲ. ಅವರು ಹೇಳುವುದನ್ನು ಅವರು ಎಂದಿಗೂ ಮಾಡುವುದಿಲ್ಲ ತಿರುಗೇಟು ನೀಡಿದರು.