ಬೆಂಗಳೂರು: 10 ಯುನಿಟ್ ಹೆಚ್ಚುವರಿ ವಿದ್ಯುತ್ ನೀಡುವ ವಿಚಾರ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, 200 ಯುನಿಟ್ ವಿದ್ಯುತ್ ಉಚಿತ ಅಂತ ಹೇಳಿದ್ವಿ. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ಕೊಡಲಾಗಿತ್ತು ಎಂದರು
20,30,40 ಯುನಿಟ್ ಬಳಕೆ ಮಾಡೋ ಗ್ರಾಹಕರಿಗೆ 10% ಹೆಚ್ಚುವರಿ ಯುನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯುನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ 10% ವಿದ್ಯುತ್ ಬದಲಾಗಿ 10 ಯುನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಕೊಂಡಿದೆ.
ಮುಂದಿನ ತಿಂಗಳ ಬಿಲ್ ನಿಂದಲೇ ಇದನ್ನ ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ.
(ಉದಾಹರಣೆ- 20 ಯುನಿಟ್ ವಿದ್ಯುತ್ ಬಳಕೆ ಮಾಡೋ ಗ್ರಾಹಕನಿಗೆ 10% ಅಂದರೆ 2 ಯುನಿಟ್ ಮಾತ್ರ ಹೆಚ್ಚುವರಿ ಸಿಗುತ್ತಿತ್ತು. ಈಗ 10 ಯುನಿಟ್ ಕೊಡುವುದರಿಂದ 20+10 ಸೇರಿ 30 ಯುನಿಟ್ ವಿದ್ಯುತ್ ಆಗಲಿದೆ.)