ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದ್ದು, ಜನವರಿ ಮೊದಲ ವಾರದಲ್ಲಿ ಸಂಪುಟ ಪುನಾರಚನೆಯಾಗಲಿದೆ. ಇನ್ನೂ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಸಿದ್ದರಾಮಯ್ಯ ಅವರ ಸಂಪುಟ ಸೇರುವ ಸಾಧ್ಯತೆ ದಟ್ಟವಾಗಿದೆ.
ಇಂದು ಸಂಜೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದಿದ್ದಾರೆ. ಈಗಾಗಲೇ ಡಿಸಿಎಂ ಡಿ ಕೆ ಶಿವಕುಮಾರ್ ದೆಹಲಿ ಪ್ರವಾಸದಲ್ಲಿದ್ದು, ಸಿಎಂ ಮತ್ತು ಡಿಸಿಎಂ ಇಬ್ಬರು ಮಲ್ಲಿಕಾರ್ಜುನ ಖರ್ಗೆ,ರಾಹುಲ್ ಗಾಂಧಿ ಭೇಟಿ ಮಾಡಲಿದ್ದಾರೆ. ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದರೆ ಸಂಪುಟ ಪುನಾರಚನೆ ಫಿಕ್ಸ್ ಎನ್ನಲಾಗುತ್ತಿದೆ. ಈಗ ಸಂಪುಟದಲ್ಲಿರುವ ೭ ರಿಂದ ೮ ಸಚಿವರನ್ನ ಕೈ ಬಿಡುವ ಮತ್ತು ಕೆಲ ಸಚಿವರ ಖಾತೆ ಬದಲಾವಣೆಯಾಗುವ ಸಾಧ್ಯತೆ ಹೆಚ್ಚಿದೆ.
ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಕಾರು ಸ್ಫೋಟಿಸುವ ಬೆದರಿಕೆ
ಪಕ್ಷ ನಿಷ್ಠೆಗೆ ಹೆಸರುವಾಸಿಯಾದ ಪುಟ್ಟರಂಗಶೆಟ್ಟಿ
ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪುಟ್ಟರಂಗಶೆಟ್ಟಿ ಹಿರಿಯ ನಾಯಕರಾಗಿದ್ದು, ಪಕ್ಷನಿಷ್ಠೆಗೂ ಹೆಸರುವಾಸಿಯಾದವರು. ಅಷ್ಟೇ ಅಲ್ಲದೆ, ಈ ಹಿಂದೆ ಸಹ ಸಚಿವರಾಗಿ ಕಾರ್ಯ ನಿರ್ವಹಿಸಿದ್ದವರು. ಈಗಾಗಿ ಈ ಬಾರಿ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆ ಇದೆ.