ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎನಿಂದ ಸುಲೇಮಾನ್ ಮತ್ತು ಸೈಯದ್ ಸಮೀರ್ ವಿಚಾರಣೆ ಮಾಡಿದ್ದು, ಅಕ್ಟೋಬರ್ 22 ರಂದು ಬಳ್ಳಾರಿಯಲ್ಲಿ ಅಮೋನಿಯಂ ನೈಟ್ರೇಟ್ ಖರೀದಿ ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಸಿಕ್ಕಿದೆ.
ಸ್ಫೋಟಕ ವಸ್ತುಗಳ ತಯಾರಿಕೆಗೆ ರಸಗೊಬ್ಬರದ ಅಂಗಡಿಯಲ್ಲಿ 1 ಕೆ.ಜಿ ಅಮೋನಿಯಂ ನೈಟ್ರೇಟ್ ಖರೀದಿ ಮಾಡಿದ್ದಾರೆ. ಇವರೊಂದಿಗೆ ಮತ್ತೊಬ್ಬ ಇದ್ದನಾ ಎಂಬುದರ ಬಗ್ಗೆ ಎನ್ಐಎ ಹುಡುಕಾಟ ನಡೆಸಿದ್ದು, ರಸಗೊಬ್ಬರದ ಅಂಗಡಿಗೆ ಭೇಟಿ ನೀಡಿರುವ NIA ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.