ನವದೆಹಲಿ: ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಟೆಕ್ಕಿಯಾಗಿದ್ದ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣಾಗಿದ್ದರು. ಸಾವಿಗೂ ಮೊದಲು ಅತುಲ್ ಸುಭಾಷ್ ಅವರು 24 ಪುಟಗಳ ಡೆತ್ನೋಟ್ ಬರೆದಿದ್ದು, ಅದನ್ನು ತಮ್ಮ ಕುಟುಂಬಸ್ಥರಿಗೆ ಕಳುಹಿಸಿದ್ದರು. ಅತುಲ್ ಸಾವು ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿತ್ತು. ಇದೀಗ ಇಲ್ಲಿನ ಉದ್ಯಮಿಯೊಬ್ಬರು ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಿದ್ದಾರೆ.
ದೆಹಲಿಯ ವುಡ್ ಬಾಕ್ಸ್ ಕೆಫೆಯ ಸಹ-ಸಂಸ್ಥಾಪಕ ಪುನೀತ್ ಖುರಾನಾ ಅವರು ಇಲ್ಲಿನ ಮಾಡೆಲ್ ಟೌನ್ನ ಕಲ್ಯಾಣ್ ವಿಹಾರ ಪ್ರದೇಶದಲ್ಲಿರುವ ತಮ್ಮ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಖುರಾನಾ ಮತ್ತು ಅವರ ಪತ್ನಿ ಮಾಣಿಕಾ ಜಗದೀಶ್ ಪಹ್ವಾ ಜೊತೆಗಿನ ವಿಚ್ಛೇದನ ಹಾಗೂ ಕೆಫೆ ವ್ಯವಹಾರಕ್ಕೆ ಸಂಬಂಧಿಸಿದ ಗಲಾಟೆ ನಡುವೆಯೇ ಈ ಘಟನೆ ನಡೆದಿದೆ. ರಾಷ್ಟ್ರ ರಾಜಧಾನಿಯಲ್ಲಿ ವುಡ್ಬಾಕ್ಸ್ ಕೆಫೆ ಹೊಂದಿದ್ದ ದಂಪತಿ ಜಂಟಿಯಾಗಿ ವ್ಯವಹಾರ ನಡೆಸುತ್ತಿದ್ದರು.
Chanakya Niti: ನಿಮಗಿರುವ ಕಷ್ಟಗಳನ್ನು ಎದುರಿಸಲು ಚಾಣಕ್ಯ ಹೇಳಿದ ಈ 10 ವಿಷಯಗಳನ್ನು ನೆನಪಿಡಿ ಸಾಕು.!
ಇಬ್ಬರ ನಡುವೆ ವ್ಯವಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಮನಸ್ತಾಪ ಏರ್ಪಟ್ಟಿತ್ತು. ಅಲ್ಲದೇ ಇಬ್ಬರ ನಡುವೆ ಮೊದಲಿನಿಂದಲೂ ದಾಂಪತ್ಯ ಕಲಹವಿತ್ತು. ಇದೇ ಕಾರಣಕ್ಕೆ ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇವರಿಬ್ಬರು 2016ರಲ್ಲಿ ಮದುವೆಯಾಗಿದ್ದರು, ಪತ್ನಿ ಮೇಲೆ ಖುರಾನಾಗೆ ಅಸಮಾಧಾನ ಇತ್ತು ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಮಧ್ಯೆ ಇಬ್ಬರ ನಡುವಿನ 16 ನಿಮಿಷಗಳ ಸಂಭಾಷಣೆಯ ಆಡಿಯೋವೊಂದು ಲಭ್ಯವಾಗಿದೆ.
ಅದರಲ್ಲಿ ಇಬ್ಬರು ಕೆಫೆ ವ್ಯವಹಾರದ ವಿಚಾರವಾಗಿ ಜಗಳವಾಡುತ್ತಿರುವುದು ಕಂಡುಬಂದಿದೆ. ಆಡಿಯೋದಲ್ಲಿ ನಾವಿಬ್ಬರೂ ಡಿವೋರ್ಸ್ ಪಡೆದುಕೊಳ್ಳೋಣ. ಆದ್ರೆ ವಿಚ್ಛೇದನದ ನಂತರವೂ ವ್ಯವಹಾರದಲ್ಲಿ ಪಾಲುದಾರಳಾಗಿರುತ್ತೇನೆ. ನೀವು ನನ್ನ ಬಾಕಿ ಸಾಲವನ್ನ ತೀರಿಸಬೇಕು ಎಂದು ಖುರಾನಾ ಪತ್ನಿ ಮನಿಕಾ ಹೇಳಿದ್ದಾರೆ. ಘಟನೆಯ ಬಳಿಕ ಪೊಲೀಸರು ಖುರಾನಾ ಪತ್ನಿಯ ಫೋನನ್ನು ವಶಕ್ಕೆ ಪಡೆದಿದ್ದು, ಆಕೆಯನ್ನು ವಿಚಾರಣೆಗೆ ಕರೆದಿದ್ದಾರೆ.