ಮೈಸೂರು: ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ ಎಂಬ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಖಂಡಿತ ನಾನು ನ್ಯಾಷನಲ್ ಲೀಡರ್ ಅಲ್ಲ, ಬಡ ಕುಟುಂಬದಿಂದ ಬಂದವನು. ಸಾಮಾನ್ಯ ಕುಟುಂಬದಿಂದ ಬಂದು ಬರವಣಿಗೆ ಮೂಲಕ ಮುಂದೆ ಬಂದೆ. ಅಪ್ಪ ಸಿಎಂ ಆಗಿದ್ರೆ ತನ್ನ ಲ್ಯಾಬ್ ಗೆ ಗುತ್ತಿಗೆ ಪಡೆಯೋರು ನ್ಯಾಷನಲ್ ಲೀಡರ್,
Akshata Murty: ನಾರಾಯಣ ಮೂರ್ತಿ ಪುತ್ರಿ ಅಕ್ಷತಾ 2 ವರ್ಷದಲ್ಲಿ ಸಂಪಾದಿಸಿದ್ದು ಎಷ್ಟು ಗೊತ್ತೇ..?
ಅಪ್ಪನ ವರುಣ ಬಿಡಿಸಿ ಬಾದಾಮಿ ಕ್ಷೇತ್ರಕ್ಕೆ ಓಡಿಸುವವರು ನ್ಯಾಷನಲ್ ಲೀಡರ್, ತಾನು ಹೇಳಿದ ವರ್ಗಾವಣೆ ಲಿಸ್ಟ್ ಗೆ ಸಹಿ ಮಾಡಿ ಅನ್ನೋದು ನ್ಯಾಷನಲ್ ಲೀಡರ್, ಮೈಸೂರು ಭಾಗದ ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ ಸಿದ್ದರಾಮಯ್ಯ ಎಂದು ಮೈಸೂರಿನಲ್ಲಿ ಯತೀಂದ್ರ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.