ಮಲಬದ್ಧತೆ ಸಮಸ್ಯೆ ಇರುವವರು ಜೋಳದ ರೊಟ್ಟಿಯನ್ನು ತಿನ್ನಬಹುದೇ ಎಂಬ ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಮಾಹಿತಿ.
ಇದರಲ್ಲಿ ಕ್ಯಾಲ್ಸಿಯಂ, ಪೊಟ್ಯಾಶಿಯಂ, ರಂಜಕ, ಕಬ್ಬಿಣ, ಪ್ರೋಟೀನ್ ಸೇರಿದಂತೆ ಹಲವು ಪೋಷಕಾಂಶವಿದ್ದು, ಇದು ನಿಮ್ಮ ರೋಗಗಳಿಂದ ರಕ್ಷಿಸುತ್ತದೆ.
ಇದು ನಿಮ್ಮ ಮೂಳೆಗಳನ್ನು ಗಟ್ಟಿಗೊಳಿಸುತ್ತದೆ.
ಇದರಲ್ಲಿ ಸಾಕಷ್ಟು ಫೈಬರ್ ಅಂಶ ಇರುವುದರಿಂದ ಇದು ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಕಾಡುವುದಿಲ್ಲ.
ಅಲ್ಲದೇ ಇದರಲ್ಲಿ ನಾರಿನಾಂಶ ಸಮೃದ್ಧವಾಗಿರುವ ಕಾರಣ ಇದು ನಿಮ್ಮ ಹೊಟ್ಟೆಯನ್ನು ದೀರ್ಘಕಾಲ ತುಂಬಿರುವಂತೆ ಮಾಡುತ್ತದೆ. ಇದರಿಂದ ನಿಮ್ಮ ತೂಕ ನಿಯಂತ್ರಣಕ್ಕೆ ಬರುತ್ತದೆ.
ಇದರಲ್ಲಿ ಮೆಗ್ನೀಶಿಯಂ ಮತ್ತು ಪೊಟ್ಯಾಶಿಯಂ ಸಮೃದ್ಧವಾಗಿದ್ದು, ಇದು ಹೃದಯವನ್ನು ಆರೋಗ್ಯವಾಗಿಡುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ