ಕೆನಡಾದ ಬ್ರಾಂಪ್ಟನ್ನಲ್ಲಿರುವ ಹಿಂದೂ ದೇವಾಲಯದ ಮೇಲೆ ನಡೆಸಿದ ಹಿಂಸಾತ್ಮಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಲ್ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದಾರೆ.
ನಿಷೇಧಿತ ಸಂಘಟನೆ ಸಿಖ್ ಫಾರ್ ಜಸ್ಟೀಸ್ನ ಸದಸ್ಯನಾ ಗಿರುವ ಖಲಿಸ್ತಾನಿ ಮೂಲಭೂತವಾದಿ ಇಂದರ್ಜಿತ್ ಗೋಸಲ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿರುವುದಾಗಿ ಪೀಲ್ ಪ್ರಾದೇಶಿಕ ಪೊಲೀಸರು ಈ ಮಾಹಿತಿ ನೀಡಿದ್ದಾರೆ.
ಅಧಿಕೃತ ಪೊಲೀಸ್ ಹೇಳಿಕೆಯ ಪ್ರಕಾರ, 21 ವಿಭಾಗದ ಕ್ರಿಮಿನಲ್ ಇನ್ವೆಸ್ಟಿಗೇಶನ್ ಬ್ಯೂರೋ ಮತ್ತು ಎಸ್ಐಟಿಯ ತನಿಖಾಧಿಕಾರಿಗಳು ಬ್ರಾಂಪ್ಟನ್ ದೇವಸ್ಥಾನದಲ್ಲಿ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಿ ಆರೋಪ ಹೊರಿಸಿದ್ದಾರೆ.
ಖಲಿಸ್ತಾನಿ ಮೂಲಭೂತವಾದಿಯನ್ನು ಬಂಧಿಸಿದ ಕೂಡಲೇ ಬಿಡುಗಡೆ ಮಾಡಲಾಯಿತು. ಇದರೊಂದಿಗೆ ಟ್ರುಡೊ ಸರ್ಕಾರ ಖಲಿಸ್ತಾನಿಗಳಿಗೆ ಬಹಿರಂಗವಾಗಿ ರಕ್ಷಣೆ ನೀಡುತ್ತಿರುವುದು ಸ್ಪಷ್ಟವಾಗಿದೆ. ದಾಳಿಕೋರರಲ್ಲಿ ಒಬ್ಬನನ್ನು ಬ್ರಾಂಪ್ಟನ್ನ ಇಂದ್ರಜಿತ್ ಗೋಸಲ್ (35) ಎಂದು ಗುರುತಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.
ನವೆಂಬರ್ 8 ರಂದು ಅವರನ್ನು ಬಂಧಿಸಲಾಯಿತು ಮತ್ತು ಆಯುಧದಿಂದ ಹಲ್ಲೆ ಮಾಡಿದ ಆರೋಪ ಹೊರಿಸಲಾಯಿತು. ಅವರನ್ನು ಷರತ್ತುಗಳೊಂದಿಗೆ ಬಿಡುಗಡೆ ಮಾಡಲಾಯಿತು ಮತ್ತು ನಂತರದ ದಿನಾಂಕದಲ್ಲಿ ಬ್ರಾಂಪ್ಟನ್ನಲ್ಲಿರುವ ಒಂಟಾರಿಯೊ ಕೋರ್ಟ್ ಆಫ್ ಜಸ್ಟಿಸ್ಗೆ ಹಾಜರಾಗಲು ನಿರ್ಧರಿಸಲಾಗಿದೆ. ದೇವಾಲಯದ ದಾಳಿ ಪ್ರಕರಣದಲ್ಲಿ ನವೆಂಬರ್ 3 ಮತ್ತು 4 ರಂದು ನಡೆದ ಅಪರಾಧ ಘಟನೆಗಳ ತನಿಖೆಗಾಗಿ ಕಾರ್ಯತಂತ್ರದ ತನಿಖಾ ತಂಡವನ್ನು ರಚಿಸಲಾಗಿದೆ.