ಕ್ಯಾನ್ಸರ್ ಪ್ರಕರಣಗಳು ವಿಶ್ವಾದ್ಯಂತ ಸರಾಸರಿಗಿಂತ ವೇಗವಾಗಿ ಹೆಚ್ಚುತ್ತಿದೆ. ಭಾರತದಲ್ಲಿ ಪುರುಷರಿಗೆ ಮಾರಣಾಂತಿಕ ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯ ಹೆಚ್ಚುತ್ತಿರುವುದು ಆತಂಕಕಾರಿ ಘಟನೆಯಾಗಿದೆ.
50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೆಚ್ಚಿನವರು ಈ ಕ್ಯಾನ್ಸರ್ ಗೆ ಒಳಗಾಗುತ್ತಾರೆ. ಇದರ ತೀವ್ರತೆ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಇತರರಿಗೆ ಹೋಲಿಸಿದರೆ ಪ್ರಾಸ್ಟೇಟ್ ಕ್ಯಾನ್ಸರ್ ನಿಧಾನವಾಗಿ ಹರಡುತ್ತಿದೆ. ಸಮಸ್ಯೆಯನ್ನು ಮೊದಲೇ ಪತ್ತೆ ಹಚ್ಚಿದರೆ, ಅದನ್ನು ತಪ್ಪಿಸಬಹುದು ಎಂದು ತಜ್ಞರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಮೈಬಣ್ಣದಿಂದ ಟೀಕೆಗೆ ಗುರಿಯಾಗಿದ್ದ ಮಿಥುನ್ ಚಕ್ರವರ್ತಿ ಮಾಡಿದ್ದು ಗೊತ್ತಾದ್ರೆ ಶಾಕ್ ಆಗ್ತೀರಾ!
ಪ್ರಾಸ್ಟೇಟ್ ಎಂಬುದು ವೀರ್ಯವನ್ನು ಪೋಷಿಸುವ ಮತ್ತು ಸಾಗಿಸುವ ಸೆಮಿನಲ್ ದ್ರವವನ್ನು ಉತ್ಪಾದಿಸುವ ಒಂದು ಗ್ರಂಥಿಯಾಗಿದೆ. ಇದರಲ್ಲಿ ಜೀವಕೋಶಗಳು ನಿಯಂತ್ರಣ ಮೀರಿ ಬೆಳೆದಾಗ ಪ್ರಾಸ್ಟೇಟ್ ಕ್ಯಾನ್ಸರ್ ಪ್ರಾರಂಭವಾಗುತ್ತದೆ. ಇದನ್ನು ಆರಂಭಿಕ ಹಂತದಲ್ಲಿ ಪತ್ತೆ ಮಾಡಿದರೆ ಗುಣಪಡಿಸಬಹುದು. ಮೊದಲು ಈ ರೋಗ ಸಾಮಾನ್ಯವಾಗಿ ವಯಸ್ಸಾದವರಲ್ಲಿ ಮಾತ್ರ ಕಂಡು ಬರುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಯುವಕರು ಮತ್ತು ಮಧ್ಯವಯಸ್ಕರು ಈ ಕ್ಯಾನ್ಸರ್ಗೆ ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ತಜ್ಞರು ಹೇಳುತ್ತಾರೆ.
ಪ್ರಾಸ್ಟೇಟ್ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿ ವಿಷಯವಾಗಿದೆ, ಅದರಲ್ಲಿಯೂ ಮೆಟ್ರೋಪಾಲಿಟನ್ ನಗರಗಳಲ್ಲಿ ವಾಸಿಸುವ 35 ರಿಂದ 44 ವರ್ಷದೊಳಗಿನವರಲ್ಲಿ ಇದು ಹೆಚ್ಚಾಗಿ ಕಂಡು ಬರುತ್ತಿದೆ. 2022 ರಲ್ಲಿ ಭಾರತದಲ್ಲಿ 14 ಲಕ್ಷ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 37,948 ಪ್ರಕರಣಗಳು ಪ್ರಾಸ್ಟೇಟ್ ಕ್ಯಾನ್ಸರ್ ಪ್ರಕರಣಗಳಾಗಿದ್ದು, ಇದು ಒಟ್ಟು ಕ್ಯಾನ್ಸರ್ ಪ್ರಕರಣಗಳಲ್ಲಿ ಶೇಕಡಾ 3 ರಷ್ಟಿದೆ.
ಪ್ರಾಸ್ಟೇಟ್ ಕ್ಯಾನ್ಸರ್ ಅನ್ನು ಆದಷ್ಟು ಬೇಗ ಪತ್ತೆ ಹಚ್ಚಿದರೆ ಮತ್ತು ಅದಕ್ಕೆ ಚಿಕಿತ್ಸೆ ನೀಡಿದರೆ ಇದನ್ನು ಗುಣಪಡಿಸಬಹುದು ಎಂದು ತಜ್ಞರು ಹೇಳುತ್ತಾರೆ. ಇದನ್ನು ನಾವು ಎಷ್ಟು ಬೇಗ ಗುರುತಿಸುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಪ್ರಾಸ್ಟೇಟ್ ಕ್ಯಾನ್ಸರ್ ದೇಹದಲ್ಲಿ ಬಹಳ ನಿಧಾನವಾಗಿ ಹರಡುತ್ತದೆ. ಆದ್ದರಿಂದ ನೀವು ಆರಂಭಿಕ ಹಂತದಲ್ಲಿ ಚಿಕಿತ್ಸೆ ಪಡೆದರೆ, ಯಾವುದೇ ಸಮಸ್ಯೆ ಇಲ್ಲ. ಯುಎಸ್ನಲ್ಲಿ, ಶೇಕಡಾ 80 ರಷ್ಟು ರೋಗಿಗಳು ಆರಂಭಿಕ ಹಂತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇವಲ 20 ಪ್ರತಿಶತದಷ್ಟು ಜನರು ಮಾತ್ರ ಕ್ಯಾನ್ಸರ್ ಮುಂದುವರಿದ ನಂತರ ವೈದ್ಯರ ಬಳಿಗೆ ಹೋಗುತ್ತಾರೆ. ಆದರೆ ನಮ್ಮ ದೇಶದಲ್ಲಿ ಇದು ತದ್ವಿರುದ್ಧವಾಗಿ ನಡೆಯುತ್ತಿದೆ.
ಪ್ರಾಸ್ಟೇಟ್ ಕ್ಯಾನ್ಸರ್ ನ ಕೆಲವು ಲಕ್ಷಣಗಳು;
ಮೂತ್ರ ವಿಸರ್ಜನೆಯ ಸಮಯದಲ್ಲಿ ಅಸ್ವಸ್ಥತೆ,
ರಾತ್ರಿಯಲ್ಲಿ ಪದೇ ಪದೇ ಎಚ್ಚರಗೊಳ್ಳುವುದು,
ಮೂತ್ರದಲ್ಲಿ ರಕ್ತಸ್ರಾವ,
ಸೊಂಟ ಅಥವಾ ಜನನಾಂಗಗಳಲ್ಲಿ ತೀವ್ರ ನೋವು