ನವದೆಹಲಿ:- ತಿರುಪತಿಯನ್ನು ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂಬ ಬೇಡಿಕೆಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ನನ್ನ ತಾಕತ್ತಿನ ಬಗ್ಗೆ ಮಾತಾಡೋ ಯೋಗ್ಯತೆ ಶೋಭಾ ಕರಂದ್ಲಾಜೆಗಿಲ್ಲ: ಸೋಮಶೇಖರ್ ಕಿಡಿ!
ಲಡ್ಡು ಸಿದ್ಧಪಡಿಸಲು ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಬಳಕೆ ಮಾಡಲಾಗಿದೆ ಎಂಬ ಪ್ರಕರಣವನ್ನು ತನಿ ಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಡಾ| ಕೆ.ಎ. ಪೌಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಪೀಠ ಈ ಆದೇಶ ನೀಡಿದೆ..
ತಿರುಪತಿ ನಗರವನ್ನು ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಸಾಮಾಜಿಕ ಕಾರ್ಯಕರ್ತ ಮತ್ತು ಗ್ಲೋಬಲ್ ಪೀಸ್ ಇನಿಶಿಯೇಟಿವ್ ಸಂಘಟನೆಯ ಅಧ್ಯಕ್ಷ ಕೆ.ಎ.ಪಾಲ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದರು. ಈ ಬಗ್ಗೆ ಖುದ್ದು ಪಾಲ್ ಅವರೇ ವಾದ ಮಂಡಿಸಿದ್ದು, ವಾದ-ವಿವಾದಗಳನ್ನು ಆಲಿಸಿದ ಬಳಿಕ ನ್ಯಾಯಮೂರ್ತಿಗಳಾದ ಬಿ.ಆರ್. ವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರಿದ್ದ ಪೀಠ ಸಿಬಿಐ ತನಿಖೆ ಮತ್ತು ತಿರುಪತಿ ನಗರವನ್ನು ಪ್ರತ್ಯೇಕ ರಾಜ್ಯ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ನೀವು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದರೆ ನಾವು ಎಲ್ಲಾ ದೇವಾಲಯಗಳು, ಗುರುದ್ವಾರಗಳು ಹಾಗೂ ಇತ್ಯಾದಿ ಪುಣ್ಯ ಸ್ಥಳಗಳಿಗೆ ಪ್ರತ್ಯೇಕ ರಾಜ್ಯಗಳನ್ನು ರಚಿಸಬೇಕಾಗುತ್ತದೆ. ಹಾಗಾಗಿ ನಿರ್ಧಿಷ್ಟ ಧರ್ಮಕ್ಕಾಗಿ ನಾವು ಪ್ರತ್ಯೇಕ ರಾಜ್ಯವನ್ನು ರಚಿಸುವಂತೆ ನಿರ್ದೇಶಿಸಲು ಸಾಧ್ಯವಿಲ್ಲ ಹೀಗಾಗಿ ಅರ್ಜಿಯನ್ನು ವಜಾಗೊಳಿಸುತ್ತೇವೇ” ಎಂದು ನ್ಯಾಯಪೀಠ ಹೇಳಿದೆ.