ದಾವಣಗೆರೆ: ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಹಂಚಿಕೆ ತಡೆಯಲು ವಾಟ್ಸ್ಆ್ಯಪ್, ಫೇಸ್ಬುಕ್, ಇನ್ಸ್ಟಾಗ್ರಾಂ ಕಂಪನಿಗೆ ಪತ್ರ ಬರೆಯಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು. ಲೈಂಗಿಕ ದೌರ್ಜನ್ಯ ಆರೋಪದಲ್ಲಿಸಿಲುಕಿರುವ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದು, ಈಗಾಗಲೇ ಅವರ ಫ್ಲೈಟ್ ಟಿಕೆಟ್ ಸೀಜ್ ಮಾಡಲಾಗಿದೆ, ಅವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು’
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋದ ತಕ್ಷಣ ಪ್ರಕರಣದಿಂದ ಬಿಟ್ಟು ಬಿಡಲು ಸಾಧ್ಯವಿಲ್ಲ. ಪ್ರಜ್ವಲ್ಗೆ 41 ಎ ಅಡಿ ನೋಟಿಸ್ ಜಾರಿ ಮಾಡಿ, ವಿಚಾರಣೆಗಾಗಿ ಎಐಟಿ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ. ಹಾಜರಾಗದಿದ್ದರೆ, ಆತನನ್ನು ವಿದೇಶದಿಂದ ಹೇಗೆ ಕರೆತರಬೇಕೆಂಬುದರ ಬಗ್ಗೆ ಎಸ್ಐಟಿ ಪ್ರಕ್ರಿಯೆ ನಡೆಸುತ್ತಿದೆ. ಇದಕ್ಕೆ ಕೇಂದ್ರ ಸರಕಾರದ ನೆರವು ಬೇಕಾಗುತ್ತದೆ” ಎಂದರು.
ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ
”ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳ ಕುರಿತು ರಾಜ್ಯ ಮಹಿಳಾ ಆಯೋಗ ರಾಜ್ಯ ಸರಕಾರಕ್ಕೆ ಪತ್ರ ಬರೆದ ತಕ್ಷಣ ಪ್ರಕರಣದ ಸೂಕ್ಷ್ಮತೆ ಮತ್ತು ಗಂಭೀರತೆ ಅರಿತು ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದ ಎಸ್ಐಟಿ ತಂಡ ರಚಿಸಲಾಗಿದೆ. ತ್ವರಿತಗತಿಯಲ್ಲಿಕೂಲಂಕುಷವಾಗಿ ತನಿಖೆ ನಡೆಸಿ, ಶೀಘ್ರ ವರದಿ ನೀಡುವಂತೆ ಸೂಚಿಸಲಾಗಿದೆ. ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡಲ್ಲ” ಎಂದು ಹೇಳಿದರು.