ಬೆಂಗಳೂರು: ಕಾರು ಅಪಘಾತ ಪ್ರಕರಣದಲ್ಲಿ ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಇದರಿಂದ ನಾಗಭೂಷಣ್ ಅವರಿಗೆ ಸಂಕಷ್ಟ ಮತ್ತಷ್ಟು ಹೆಚ್ಚಲಿದೆ. ಮುಂದಿನ ದಿನಗಳಲ್ಲಿ ಪ್ರಕರಣ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಅಕ್ಟೋಬರ್ 30ರಂದು ಬೆಂಗಳೂರಿನ ಕೋಣನ ಕುಂಟೆ ಸಮೀಪ ಅಪಘಾತ ಸಂಭವಿಸಿತ್ತು. ನಾಗಭೂಷಣ್ ಓಡಿಸುತ್ತಿದ್ದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಈ ವೇಳೆ ಪ್ರೇಮಾ ಎಂಬುವವರು ಮೃತಪಟ್ಟರೆ, ಅವರ ಪತಿ ಕೃಷ್ಣ ಅವರಿಗೆ ಗಂಭೀರ ಗಾಯವಾಗಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಚೇತರಿಕೆ ಕಂಡಿದ್ದು, ಅವರು ಹೇಳಿಕೆ ದಾಖಲು ಮಾಡಿದ್ದಾರೆ.