ಬೆಂಗಳೂರು: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ನಾಗರಬಾವಿಯ ರಿಂಗ್ ರಸ್ತೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬೇನಂ ಬರ್ಮನ್ ಮೃತಪಟ್ಟ ದುರ್ಧೈವಿಯಾಗಿದ್ದು, ಘಟನೆ ಬಳಿಕ ಕಾರು ನಿಲ್ಲಿಸದೇ ಚಾಲಕ ಪರಾರಿ ಆಗಿದ್ದಾನೆ. ಈ ಸಂಬಂಧ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದು, ದೂರಿನ ಅನ್ವಯ ಬ್ಯಾಟರಾಯನಪುರ ಪೊಲೀಸರು ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
