ಪಾಟ್ನಾ:- ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಐವರು ನೇಪಾಳಿ ಪ್ರಜೆಗಳು ಸಾವಿಗೀಡಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಕುಂಭಮೇಳದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಕಾರಿನಲ್ಲಿ ಒಂಬತ್ತು ಜನರಿದ್ದರು. ಅವರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಅರ್ಚನಾ ಠಾಕೂರ್, ಇಂದು ದೇವಿ, ಮಂತರ್ಣಿ ದೇವಿ, ಬಾಲ ಕೃಷ್ಣ ಝಾ ಮತ್ತು ಚಾಲಕ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಮನೋಹರ್ ಠಾಕೂರ್, ಸೃಷ್ಟಿ ಠಾಕೂರ್, ಕಮ್ನಿ ಝಾ ಮತ್ತು ದೇವತರಣ್ ದೇವಿ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ಶನಿವಾರ ಅಪಘಾತ ಸಂಭವಿಸಿದೆ. ಎಲ್ಲರೂ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಪ್ರಯಾಗ್ರಾಜ್ನಿಂದ ಹಿಂತಿರುಗುತ್ತಿದ್ದರು. ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಮೃತಪಟ್ಟಿದ್ದಾರೆ. ಮಧುಬನಿ ಚತುಷ್ಪಥ ಬೈಪಾಸ್ನಲ್ಲಿ ವೇಗವಾಗಿ ಬಂದ ಎಸ್ಯುವಿ, ಬೈಕರ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಈ ಅವಗಢ ಸಂಭವಿಸಿದೆ