ಸ್ಟಾಕ್ಹೋಮ್: ಕೋವಿಡ್-19 ಲಸಿಕೆಗಳನ್ನು (Covid-19 Vaccine) ಅಭಿವೃದ್ಧಿಪಡಿಸುವಲ್ಲಿ ಮಹತ್ವದ ಪಾತ್ರವಹಿಸಿರುವ ಹಂಗೇರಿ ಹಾಗೂ ಅಮೆರಿಕದ ವಿಜ್ಞಾನಿಗಳಾದ ಕ್ಯಾಲಿಟನ್ ಕಾರಿಕೊ (Katalin Kariko) ಹಾಗೂ ಡ್ರೂ ವೈಸ್‌ಮನ್ (Drew Weissman) ಅವರಿಗೆ 2023ನೇ ಸಾಲಿನ ವೈದ್ಯಕೀಯ ವಿಭಾಗದ ನೋಬೆಲ್ ಪುರಸ್ಕಾರ (Nobel Prize) ದೊರೆತಿದೆ.
Ankit Baiyanpuria: ಪ್ರಧಾನಿಯೊಂದಿಗೆ ಸ್ವಚ್ಛಾಂಜಲಿಯಲ್ಲಿ ಭಾಗಿಯಾಗಿದ್ದ ಅಂಕಿತ್ ಬೈಯನ್ ಪುರಿಯಾ ಯಾರು ಗೊತ್ತಾ..?
ವೈಜ್ಞಾನಿಕ ಜಗತ್ತಿನಲ್ಲಿ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಡನ್‌ನ ಕರೋಲಿನ್ಸ್ಕಾ ಇನ್‌ಸ್ಟಿಟ್ಯೂಟ್ ವೈದ್ಯಕೀಯ ವಿಶ್ವವಿದ್ಯಾಲಯದ ನೊಬೆಲ್ ಅಸೆಂಬ್ಲಿ ಆಯ್ಕೆ ಮಾಡಿದೆ. ಪ್ರಶಸ್ತಿ ವಿಜೇತರಿಗೆ 8.31 ಕೋಟಿ ರೂ. ನಗದು ಬಹುಮಾನ ರೂಪದಲ್ಲಿ ಸಿಗಲಿದೆ. ಕೋವಿಡ್-19 ವಿರುದ್ಧ ಪರಿಣಾಮಕಾರಿಯಾದ ಎಮ್‌ಆರ್‌ಎನ್‌ಎ ಲಸಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ಕಾರಿಕೊ ಹಾಗೂ ವೈಸ್‌ಮನ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ. ಹೀಗಾಗಿ 2023ರ ನೋಬೆಲ್ ಪುರಸ್ಕಾರವನ್ನು ಅವರಿಗೆ ನೀಡಲು ನಿರ್ಧರಿಸಿದ್ದಾಗಿ ಆಯ್ಕೆಯ ಸಮಿತಿ ತಿಳಿಸಿದೆ.