ಬೆಂಗಳೂರು: ಬಿಜೆಪಿ ಕಾರ್ಯಕರ್ತ ನವೀನ್ ಎಂಬವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ಕಾಂಗ್ರಸ್ ಪಕ್ಷ ಮತ್ತು ಡಿಕೆ ಸಹೋದರರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಂಡೆ ಪುಡಿಪುಡಿಯಾಗುವ ವಾತಾವರಣ ಉದ್ಙವಿಸಿರುವ ಹಿನ್ನೆೆಲೆಯಲ್ಲಿ ಹತಾಶರಾಗಿರುವ ಕಾಂಗ್ರೆಸಿಗರು ಇದೀಗ ಗೂಂಡಾಗಿರಿಗೆ ಮುಂದಾಗಿದ್ದಾರೆ ಎಂದು ವ್ಯಂಗ್ಯಭರಿತ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಚ್ ಮಾಡಿರುವ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಂಸದ ಡಿಕೆ ಸುರೇಶ್ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯೋಗ ಮತ್ತು ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.
Old Pension Scheme: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಳೆಯ ಪಿಂಚಣಿಗೆ ಮಹತ್ವದ ಆದೇಶ
“ಹಣ, ಹೆಂಡ ಹಾಗೂ ತೋಳ್ಬಲದ ಗೂಂಡಾಗಿರಿ ರಾಜಕೀಯಕ್ಕೆ ಹೆಸರಾಗಿರುವ ಕರ್ನಾಟಕ ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರದಲ್ಲಿ ಬಂಡೆ ಪುಡಿ ಪುಡಿಯಾಗುವ ವಾತಾವರಣ ಉದ್ಭವಿಸಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ಸಿಗರು ಹತಾಶರಾಗಿದ್ದಾರೆ. ಇವರಿಗೆ ವಿರುದ್ಧವಾಗಿ ನಿಂತಿರುವ ಮತದಾರರು ಹಾಗೂ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಮೇಲೆ ಅಮಾನುಷ ಹಲ್ಲೆ ನಡೆಸಿ ಕ್ಷೇತ್ರದಲ್ಲಿ ಭಯ ಮೂಡಿಸುವ ಕೃತ್ಯ ಆರಂಭಿಸಿದ್ದಾರೆ.