ಬೆಂಗಳೂರು:- ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಪ್ರಕರಣದಲ್ಲಿ ನಿರ್ಲಕ್ಷ್ಯದ ಆರೋಪದಲ್ಲಿ ಇಬ್ಬರು ಬೆಸ್ಕಾಂ ಅಧಿಕಾರಿಗಳನ್ನು ಇಂಧನ ಇಲಾಖೆ ಅಮಾನತು ಮಾಡಿದ್ದು, ಮೃತರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದೆ.
ಈ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರತಿಕ್ರಿಯಿಸಿ, ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ಶಾಕ್ಗೆ ಒಬ್ಬ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ದುರ್ದೈವದ ಘಟನೆ ನಡೆದಿದೆ. ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ AE ಮತ್ತು AEE ಯನ್ನು ಅಮಾನತುಗೊಳಿಸಲಾಗಿದೆ ಮತ್ತು ಇದಕ್ಕೆ ಕಾರಣಾದವರು ಮತ್ತಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ನೀಡಲಿದೆ ಎಂದು ತಿಳಿಸಿದ್ದಾರೆ.