ಬೆಂಗಳೂರು: ಬೆಳಗಾವಿ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ ಪ್ರಕರಣದಲ್ಲಿ ಸಿಟಿ ರವಿ ಅವರು ಪೊಲೀಸರಿಂದ ಬಂಧನ ನಂತರ ಬಿಡುಗಡೆಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರವಿ ಸರ್ಕಾರ ಮತ್ತು ಪೊಲೀಸರ ವಿರುದ್ಧ ಕಿಡಿಕಾರಿದ್ದರು. ಇದೀಗ ಸುವರ್ಣ ಸೌಧದಿಂದ ಬಂಧನವಾಗಿ ಬಿಡುಗಡೆವರೆಗೂ ನಡೆದ ಘಟನೆಯ ಬಗ್ಗೆ ಸಿಟಿ ರವಿ ಅವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧರಿಸಿದ ಬೆನ್ನಲ್ಲೇ ಸಿಟಿ ರವಿ ಕೂಡ ತನ್ನ ಬಂಧನದ ವಿರುದ್ಧ ದೂರು ನೀಡಿದ್ದಾರೆ.
ಇಂದು ನಗರದ ಡಿಜಿಪಿ ಕಚೇರಿಯಲ್ಲಿ ಭೇಟಿ ನೀಡಿ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬೆಳಗಾವಿ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮತ್ತು ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ವಿರುದ್ಧ ಆರೋಪ ಮಾಡಿದ್ದಾರೆ.
ಬೆಳ್ಳಂ ಬೆಳಗ್ಗೆ ಟೀ ಜೊತೆಗೆ ಬಿಸ್ಕತ್ ತಿಂತೀರಾ..? ಹಾಗಾದ್ರೆ ಈ ಅಭ್ಯಾಸ ಈಗ್ಲೇ ಬಿಟ್ಟು ಬಿಡಿ!
ತಮ್ಮನ್ನು ಎತ್ತಿ ಪಶುವಿನ ರೀತಿ ಕಿಡ್ನ್ಯಾಪ್ ಮಾಡಿದ್ದಾರೆಂದು ಬೆಳಗಾವಿ ಪೊಲೀಸ್ ಕಮಿಷನರ್, ಎಸ್ಪಿ ವಿರುದ್ಧ ಸಿ.ಟಿ.ರವಿ ಆರೋಪ ಮಾಡಿದ್ದಾರೆ. ಇಡೀ ಸನ್ನಿವೇಶ ಫೇಕ್ ಎನ್ಕೌಂಟರ್ ರೀತಿ ಇತ್ತು. ಲೈಸೆನ್ಸ್ಡ್ ಸುಪಾರಿ ಕಿಲ್ಲರ್ಗಳ ರೀತಿ ಇತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಟಿ ರವಿ, ನನ್ನನ್ನು ಅಕ್ರಮವಾಗಿ ಬಂಧಿಸಿ, ದೂರುಕೊಟ್ಟ ಬಳಿಕವೂ ಎಫ್ಐ ಆರ್ ಹಾಕದೆ ನನ್ನ ಮೇಲೆ ದೌರ್ಜನ್ಯವೆಸಗಿ, ಕೆಲವು ಪ್ರಭಾವಿ ವ್ಯಕ್ತಿಗಳ ನಿದರ್ಶನದಂತೆ ರಾತ್ರಿ ಇಡೀ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡಿಸಿ, ಸಂಪೂರ್ಣವಾಗಿ ಕಾನೂನಿನ ಉಲ್ಲಂಘನೆ ಮಾಡಿದ ಪೊಲೀಸ್ ಇಲಾಖೆಯ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಬಿಜೆಪಿ ನಿಯೋಗದೊಂದಿಗೆ ತೆರಳಿ ದೂರು ನೀಡಲಾಗಿದೆ ಎಂದು ಬರೆದುಕೊಂಡಿದ್ದಾರೆ.