ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿಸಿಬಿಐಗೆ (CBI) ಅನುಮತಿಸಿದ್ದ ಆದೇಶವನ್ನು ಸರ್ಕಾರವು ಹಿಂಪಡೆದಿರುವುದರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ (High Court) ಆದೇಶವನ್ನು ಕಾಯ್ದಿರಿಸಿದೆ.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿಕೆಶಿ ಅವರ ವಿರುದ್ಧ ದಾಖಲಾಗಿದ್ದ ಈ ಕೇಸ್ ಅನ್ನು ಸಿಬಿಐಗೆ ತನಿಖೆಗೆ ವಹಿಸಲಾಗಿತ್ತು. ತದನಂತರದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರವು, ಸಿಬಿಐ ತನಿಖೆಗೆ ಹಿಂದಿನ ಸರ್ಕಾರ ನೀಡಿದ್ದ ಆದೇಶ ಹಿಂಪಡೆದಿತ್ತು.
ಆಷಾಡ ಮುಗಿಸಿ ಮೊದಲ ಬಾರಿ ಮನೆಗೆ ಬಂದ ಅಳಿಯನಿಗೆ 100 ಬಗೆಯ ಭಕ್ಷ್ಯಗಳನ್ನ ಉಣಬಡಿಸಿದ ಅತ್ತೆ!
ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿ, ಸರ್ಕಾರ ಒಪ್ಪಿಗೆ ನೀಡಿದ ಬಳಿಕ ಸಿಬಿಐ ಎಫ್ಐಆರ್ ದಾಖಲಿಸಿದೆ. ಈಗ ರಾಜ್ಯ ಸರ್ಕಾರ ಒಪ್ಪಿಗೆ ಹಿಂಪಡೆದಿದೆ. ಅನುಮತಿ ಹಿಂಪಡೆದ ನಂತರ ಎಫ್ಐಆರ್ ಏನಾಗಲಿದೆ? ಸಿಬಿಐ ತನಿಖೆಯ ಕುರಿತ ಪ್ರಶ್ನೆ ಹೈಕೋರ್ಟ್ ಮುಂದಿದೆ ಎಂದು ವಾದ ಮಂಡಿಸಿದರು. ವಾದವನ್ನು ಆಲಿಸಿದ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ.
2013 ರ ಏ.1 ರಿಂದ 2018 ರ ಏ.30 ಅವಧಿಯಲ್ಲಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದಡಿ ಡಿಕೆಶಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು. ಹೈಕೋರ್ಟ್ನಲ್ಲಿ ಡಿಕೆಶಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದರೆ, ಯತ್ನಾಳ್ ಸಲ್ಲಿಸಿದ್ದ ರಿಟ್ ಅರ್ಜಿಯ ಪರ ವಕೀಲರಾದ ಪ್ರಸನ್ನಕುಮಾರ್ ವಾದ ಮಾಡಿದರು
2019ರಲ್ಲಿ ಬಿಜೆಪಿ ಸರಕಾರವು ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಅನುಮತಿ ನೀಡಿತ್ತು. ಅದನ್ನು ಪ್ರಶ್ನಿಸಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು. ಆನಂತರ ಅವರು ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಮಧ್ಯೆ, ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ನಂತರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನ. 28ರಂದು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಮೇಲ್ಮನವಿ ಹಿಂಪಡೆದಿದ್ದರು. ಹಾಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು. ಇದಕ್ಕೆ ಆಕ್ಷೇಪಿಸಿ, ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.