ಬೆಂಗಳೂರು: ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ನಗದು & ಚಿನ್ನಾಭರಣ ಕಳವು ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 6 ಜನ ಅಪರಿಚಿತರು ಈ ಕೃತ್ಯ ಎಸಗಿದ್ದು, ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ವಿಚಾರಣೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 80 ಸಾವಿರ ನಗದು ಹಣ, 3 ಮೊಬೈಲ್ ಫೋನ್ ಗಳು, ಕೃತ್ಯಕ್ಕೆ ಬಳಸಿದ್ದ 4 ದ್ವಿಚಕ್ರ ವಾಹನಗಳು, & ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
