ನವದೆಹಲಿ: ಪಾಕಿಸ್ತಾನ (Pakistan) ಮತ್ತು ಕಾಂಗ್ರೆಸ್ (Congress) ಸ್ಥಿತಿ ಒಂದೇ ರೀತಿಯಾಗಿದೆ. ಪಾಕ್ ಆರ್ಥಿಕವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ. ಈಗ ನೈತಿಕವಾಗಿ, ಬೌದ್ಧಿಕವಾಗಿಯೂ ದಿವಾಳಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.
ಪಾಕ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬ ಬಿಜೆಪಿ ಆರೋಪದ ವಿಚಾರಕ್ಕೆ ನವದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಎಲ್ಲಾ ಮಾಧ್ಯಮದಲ್ಲೂ ವಿಚಾರ ಬಂದಿದೆ. ಆ ವ್ಯಕ್ತಿಯನ್ನು ಸರ್ಕಲ್ ಮಾಡಿ ಗುರುತಿಸಲಾಗಿದೆ. ಸರ್ಕಾರ ಈ ವ್ಯಕ್ತಿಯನ್ನು ವಿಚಾರಣೆ ಮಾಡಿಲ್ಲ. ಇದು ತುಷ್ಟೀಕರಣ ರಾಜಕಾರಣದ ಪರಾಕಾಷ್ಠೆ ಎಂದು ಹರಿಹಾಯ್ದರು.
ಕುತ್ತಿಗೆ, ಭುಜದ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ.? ಹಾಗಿದ್ರೆ ಮಲಗುವ ಶೈಲಿ ಚೇಂಜ್ ಮಾಡಿಕೊಳ್ಳಿ
ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ ವಿಚಾರವಾಗಿ ಮಾತನಾಡಿದ ಅವರು, ಜಾತಿಗಣತಿ ವರದಿ ಸರಿಯಿಲ್ಲ ಎಂದು ಕಾಂಗ್ರೆಸ್ ಪಕ್ಷದವರೇ ಹೇಳಿದ್ದಾರೆ. ಡಿಸಿಎಂ, ಶಾಮನೂರು ಅವರೇ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರದಲ್ಲೇ ಇರುವ ಭಿನ್ನಾಭಿಪ್ರಾಯದ ಬಗ್ಗೆ ಏನು ಹೇಳುತ್ತೀರಾ? ಇದು ಗಣತಿ ಅಲ್ಲ,
ಕೇವಲ ವರದಿ. ಜನಗಣತಿ ಮಾಡಲು ಕೇಂದ್ರ ಸರ್ಕಾರಕ್ಕೆ ಮಾತ್ರ ಅವಕಾಶ. ಗಣತಿ ಸರಿ ಆಗಿಲ್ಲ, ಮನೆಮನೆಗೆ ಹೋಗಿಲ್ಲ ಎಂಬ ಆರೋಪ ಕೂಡ ಇದೆ. ಚುನಾವಣಾ ಸಮಿತಿ ಸಭೆಯ ಬಗ್ಗೆ ನನಗೇನು ಗೊತ್ತಿಲ್ಲ. ಅದು ಪಕ್ಷದ ರಾಷ್ಟ್ರೀಯ ನಾಯಕರಿಗೆ ಬಿಟ್ಟ ವಿಚಾರ. ಊಹಾಪೋಹಗಳ ಮೇಲೆ ಉತ್ತರಕೊಡಲ್ಲ ಎಂದರು.