ಬೆಂಗಳೂರು : ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾತನಾಡಿದ ಸಿಎಂ, ” ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು” ಎಂದು ತಿಳಿಸಿದರು.
ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು CWRC ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು ಎಂದು ಮುಖ್ಯಮಂತ್ರಿಗಳು ಹೇಳಿದರು.
G Parameshwar: ನಾಗೇಂದ್ರ ಬಂಧನ ವಿಚಾರ: ತನಿಖೆಗೆ ನಮ್ಮ ತಕರಾರಿಲ್ಲ – ಜಿ ಪರಮೇಶ್ವರ್
CWRC ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ. ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಯಿತು ಎಂದು ಮುಖ್ಯಮಂತ್ರಿಗಳು ಹೇಳಿದರು.
ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು. ವಿಪಕ್ಷಗಳ ನಾಯಕರನ್ನು ಮತ್ತು ರಾಜ್ಯದ ಸಂಸದರನ್ನು ಸಭೆಗೆ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು. ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯನ್ನು ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.