ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಹಿನ್ನಲೆ ಬಾಯಿ ಬಡಿದುಕೊಂಡು ಕನ್ನಡಪರ ಸಂಘಟನೆಗಳ ಪ್ರತಿಭಟನೆ ನಡೆಸುತ್ತಿದ್ದಾರೆ. ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಸತತವಾಗಿ ನಡೆಯುತ್ತಿರುವ ಪ್ರತಿಭಟನೆಯಾಗಿದ್ದು, ಕನ್ನಡ ಪರ ಸಂಘಟನೆ ಹೋರಾಟಗಾರರಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.
ಭುವನೇಶ್ವರಿ ವೃತ್ತದ ಬಳಿ ಬಾಯಿಬಡಿದುಕೊಂಡು ವಿನೂತನವಾಗಿ ಹೋರಾಟ ನಡೆಸಿದ ಕನ್ನಡ ಪರ ಸಂಘಟನೆ ಹೋರಾಟಗಾರರು. ಕನ್ನಡಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ಚಾರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.