ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಚಿನ್ನದಂತಹ ಅವಕಾಶವಿದೆ. ತಾವು ಸತ್ಯಹರಿಶ್ಚಂದ್ರ ಅಂತ ಸಾಬೀತು ಮಾಡುವ ಅವಕಾಶ ಇದೆ. ನೀವು ತಪ್ಪು ಮಾಡಿಲ್ಲ ಅನ್ನೋದನ್ನು ತನಿಖೆ ಎದುರಿಸಿ ತೋರಿಸಿ. ಸಚಿವ ಸಂಪುಟ ನಿರ್ಧಾರವನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಯಾವ ರೀತಿ ಹೋರಾಟ ಮಾಡಬೇಕೆಂದು ಚರ್ಚೆ ನಡೆಸಿ ನಿರ್ಧಾರ. ನಮ್ಮ ಅವಧಿಯಲ್ಲಿ ತೆಗೆದುಕೊಂಡ ನಿರ್ಧಾರ ರಾಜಕೀಯ ಪ್ರೇರಿತವಲ್ಲ. ಪ್ರಾಥಮಿಕ ತನಿಖೆ ಮಾಹಿತಿ ಆಧರಿಸಿ ಸಿಬಿಐ ತನಿಖೆಗೆ ಕೊಡಲಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
Bangalore Kambala: ಅರಮನೆ ಮೈದಾನ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ : ಇಲ್ಲಿದೆ ಡಿಟೇಲ್ಸ್
ರಾಜ್ಯ ಸರ್ಕಾರದ ಈ ನಿರ್ಣಯ ಸಂಪೂರ್ಣ ಕಾನೂನು ಬಾಹಿರ. ಐಟಿ ದಾಳಿ ವೇಳೆ ರಾಜ್ಯ ಮತ್ತು ಬೇರೆ ಕಡೆ ಸಾಕಷ್ಟು ಹಣ ಸೀಜ್ ಆಗಿತ್ತು. ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರ ದುರದೃಷ್ಟಕರ. ಕಾಂಗ್ರೆಸ್ ಸರ್ಕಾರ ಕಾನೂನಿನ ವಿರುದ್ಧವಾಗಿ ಈ ನಿರ್ಣಯ ಕೈಗೊಂಡಿದೆ. ಡಿ.ಕೆ.ಶಿವಕುಮಾರ್ರನ್ನು ಉಳಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ಕಾನೂನಿನ ಭಯ ಇದೆಯಾ? ಡಿಕೆ ಶಿವಕುಮಾರ್ ಅವರೇ ಸರ್ಕಾರದ ನಿರ್ಧಾರ ವಿರೋಧಿಸಬೇಕಿತ್ತು ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು