ಬೆಂಗಳೂರು:- ನಗರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ ಮಾಡಿದ್ದು, ಯುವತಿಯನ್ನು ರಕ್ಷಣೆ ಮಾಡಲಾಗಿದೆ.
ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿಪೊಲೀಸರು ದಾಳಿ ಮಾಡಿದ್ದಾರೆ. ಓರ್ವ ಯುವತಿಯನ್ನು ರಕ್ಷಿಸಿ ಕಬ್ಬನ್ ಪಾರ್ಕ್ ಠಾಣೆಗೆ ಕರೆತಂದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ವಿದೇಶದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.