ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Breaking News: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಕುಡುಪು ಪೆದಮಲೆ ಗ್ರಾಮದ ನಿವಾಸಿ ನಿಶಾಂತ್ ಶೆಟ್ಟಿ ಬಂಧಿತ ಆರೋಪಿ. ಈತನಿಂದ 1.50 ಲಕ್ಷ ಮೌಲ್ಯದ 6 ಕೆ.ಜಿ ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಆರೋಪಿ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ಖರೀದಿಸಿ ತಂದು ಸಣ್ಣ ಸಣ್ಣ ಪ್ಯಾಕೆಟ್ ಮಾಡಿಕೊಂಡು ಮಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದ. ಈತ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಒಳಪೇಟೆಯಲ್ಲಿ ಗೂಡ್ಸ್ ಟೆಂಪೋದಲ್ಲಿ ಗಾಂಜಾ ಸಾಗಿಸುವಾಗ ಸಿಸಿಬಿ ಬಲೆಗೆ ಬಿದ್ದಿದ್ದಾನೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಒಟ್ಟು 9.11 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.