ಬೆಂಗಳೂರು:– ಪ್ರತಿಷ್ಠಿತ ಬ್ರಾಂಡ್ ಹೆಸರನ್ನ ನಕಲಿಸಿ ಬಟ್ಟೆ ಮಾರುತ್ತಿದ್ದ ಗೋಡೌನ್ ಮೇಲೆ ಸಿಸಿಬಿ ದಾಳಿ ನಡೆಸಿದೆ. ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ದಾಳಿ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯದ ಬಟ್ಟೆಗಳನ್ನು ಸಿಸಿಬಿ ಜಪ್ತಿ ಮಾಡಿದೆ. ದಾಳಿ ವೇಳೆ ಬರೋಬ್ಬರಿ1.5ಕೋಟಿ ಮೌಲ್ಯದ ಬಟ್ಟೆಯನ್ನು ಸಿಸಿಬಿ ಸೀಜ್ ಮಾಡಿದೆ. ಅರ್ಮನಿ, ಬರ್ಬರಿ, ಗ್ಯಾಂಟ್ ಸೇರಿದಂತೆ ಪ್ರತಿಷ್ಠಿತ ಬ್ರಾಂಡ್ ಗಳ ಬಟ್ಟೆ ಎಂದು ಅಕ್ರಮ ಮಾರಾಟ ಮಾಡಲಾಗುತ್ತಿತು.
ಪಟೆಲ್ ಎಕ್ಸ್ಪೋರ್ಟ್ ಹಾಗೂ ಆರ್ ಬಿ ಫ್ಯಾಷನ್ ಗೋಡೌನ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ವೇಳೆ ಬೇರೆ ಬೇರೆ ಕಡೆಯೂ ಇದೇ ರೀತಿ ಫೇಕ್ ಬ್ರಾಂಡ್ ಗೋಡೌನ್ ಹೊಂದಿರೋದು ಬೆಳಕಿಗೆ ಬಂದಿದೆ.
ಎಸ್ ಆರ್ ನಗರ, ಮಾಗಡಿ ರೋಡ್, ಬೇಗೂರು ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ನಕಲಿ ಬ್ರಾಂಡ್ ಬಟ್ಟೆಯ ಗೋಡೌನ್ ಇರೋದು ಬೆಳಕಿಗೆ ಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಸಿಸಿಬಿ ಟೀಮ್ ತನಿಖೆ ಮುಂದುವರೆಸಿದೆ.