ಬೆಳಗಾವಿ : ಮೊದಲಿನಿಂದ ಸಿಡಿ ವಿಚಾರದ ಕುರಿತು ಪದೇ ಪದೇ ಹೇಳಿಕೊಂಡು ಬಂದಿದ್ದೆ. ಆಗ ಎಲ್ಲರೂ ನನ್ನ ನೆಗ್ಲೆಟ್ ಮಾಡಿದ್ರೂ, ನಗ್ತಾ ಕೂತಿದ್ರೂ, ಇವತ್ತು ಒಬ್ಬರಿಗೆ ಆಗಿದೆ, ಮುಂದೆ ಸಿದ್ದರಾಮಯ್ಯಗೂ ಬರಬಹುದು, ಪರಮೇಶ್ವರ ಅವರಿಗೂ ಬರಬಹುದು ಎಂದು ಮಾಜಿ ಸಚಿವ, ಗೋಕಾಕ್ನ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಗೋಕಾಕ್ನಲ್ಲಿ ಮತದಾನದ ಬಳಿಕ ಮಾತನಾಡಿದ ಅವರು, ಮುಂದೆ ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರದ್ದು ಸಿಡಿ ಬರಬಹುದು . ದಯವಿಟ್ಟು ಗೃಹ ಸಚಿವರು, ಮುಖ್ಯಮಂತ್ರಿಗಳು ಪಕ್ಷಾತೀತವಾಗಿ ಇಂತಹದ್ದಕ್ಕೆ ಇತಿಶ್ರೀ ಹಾಡಬೇಕು. ಈ ವಿಷಯದಲ್ಲಿ ಮುಖ್ಯಮಂತ್ರಿಗಳನ್ನು ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಹೇಳಿದರು.
Hair Care: ಕೂದಲು ದಟ್ಟವಾಗಿರಲು ವಾರಕ್ಕೆ ಎಷ್ಟು ಬಾರಿ ಎಣ್ಣೆ ಹಚ್ಚಬೇಕು ಗೊತ್ತಾ?
ಇನ್ನು, ಪ್ರಜ್ವಲ್ ರೇವಣ್ಣ ಕೇಸ್ನಲ್ಲಿ ಡಿಕೆ ಶಿವಕುಮಾರ್ ಆಡಿಯೋ ರಿಲೀಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಪ್ರಕರಣದಲ್ಲಿ ಆಡಿಯೋ ಸುತ್ತು ಬಳಸಿ ಇದೆ, ನನ್ನ ಕೇಸ್ನಲ್ಲಿ ನೇರವಾಗಿ ಇರೋದು ಇದೆ. ಡಿಕೆ ಶಿವಕುಮಾರ್ ನೇರವಾಗಿ ಭಾಗಿಯಾದ ಬಗ್ಗೆ ನನ್ನ ಬಳಿ ಸಾಕ್ಷಿ ಇವೆ. ಈ ಕೇಸ್ನಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿರುವುದು, ನೇರವಾಗಿ ಇರೋದು ಇದೆ. ಅವರ ಬಳಿ ಅಲ್ಲಿ ಇಲ್ಲಿ ಅಂತಾ ಸುತ್ತು ಹಾಕಿರೋದು ಇದು ಎಂದರು.