ಬೆಂಗಳೂರು: ಕನ್ನಡಿಗ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಕುಟುಂಬ ಅಯೋಧ್ಯೆಯಲ್ಲಿ ನಡೆಯುವ ರಾಮಲಲ್ಲಾ ಪ್ರಾಣ ಪ್ರತಿಷ್ಠೆಯಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ಅಯೋಧ್ಯೆಯಲ್ಲೇ ನಿಖಿಲ್ ಕುಮಾರಸ್ವಾಮಿ ಬರ್ತ್ ಡೇ ಆಚರಿಸಿಕೊಂಡರು.
ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ದಿನವೇ ಪುಣ್ಯಭೂಮಿ ಅಯೋಧ್ಯೆಯಲ್ಲಿ ಜನ್ಮದಿನ ಆಚರಿಸಿಕೊಂಡಿದ್ದು ನನ್ನ ಪುಣ್ಯ. ಈ ಸಂತೋಷದ ಗಳಿಗೆಯಲ್ಲಿ ತಾತ ದೇವೇಗೌಡ ಅವರು ಮತ್ತು ಅಜ್ಜಿ ಚೆನ್ನಮ್ಮ ಅವರು ಹಾಗೂ ತಂದೆಯವರಾದ ಕುಮಾರಸ್ವಾಮಿ ಅವರು ಜೊತೆಯಲ್ಲಿದ್ದಿದ್ದು ಸಂಭ್ರಮ ಮತ್ತಷ್ಟು ಹೆಚ್ಚಿಸಿದೆ ಎಂದು ನಿಖಿಲ್ ಕುಮಾರ್ ಸ್ವಾಮಿ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ವಾಜಪೇಯಿ ಕೂಡ 6 ವರ್ಷ ಪ್ರಧಾನಿ ಆಗಿದ್ದರು. ಆದರೆ, ರಾಮ ಮಂದಿರದ ಮೊದಲ ಕಲ್ಲು ಸ್ವೀಕಾರ ಮಾಡೋಕು ಅವತ್ತು ವಾಜಪೇಯಿ ಅವರಿಗೆ ಕಷ್ಟ ಆಯ್ತು. ಇದು ಮೋದಿ ಅವರ ಪೂರ್ವ ಜನ್ಮ ಪುಣ್ಯವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತಿಳಿಸಿದರು.