ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಿರಾಳರಾಗಿದ್ದಾರೆ. ಸುಮಾರು ಏಳು ತಿಂಗಳ ಕಾಲ ಜೈಲಿನಲ್ಲಿದ್ದ ದರ್ಶನ್ ಇದೀಗ ರೆಗ್ಯೂಲರ್ ಬೇಲ್ ಮೇಲೆ ಹೊರ ಬಂದಿದ್ದಾರೆ.
ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಮೈಸೂರಿನ ತಮ್ಮ ಫಾರ್ಮ್ ಹೌಸ್ ನಲ್ಲಿ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಜೊತೆ ಸೇರಿ ಸೆಲೆಬ್ರೇಟ್ ಮಾಡಿದ್ದಾರೆ.
ನಟ ದರ್ಶನ್ ಅವರು ಕಳೆದ ಆರು ತಿಂಗಳಲ್ಲಿ ಸಾಕಷ್ಟು ಬೀಳುಗಳನ್ನು ಕಂಡರು. ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿ ಸಾಕಷ್ಟು ತೊಂದರೆ ಅನುಭವಿಸಿದರು. ಈಗ ದರ್ಶನ್ ಅವರು ಈ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿದ್ದು ಇದೀಗ ಮೊದಲ ಹಬ್ಬವನ್ನು ಆಚರಿಸಿದ್ದಾರೆ.
ದರ್ಶನ್ ಅವರು ಮೈಸೂರಿನ ತಮ್ಮ ಫಾರ್ಮ್ಹೌಸ್ನಲ್ಲಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಕುಟುಂಬವೂ ಇದರಲ್ಲಿ ಭಾಗಿ ಆಗಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ದರ್ಶನ್ ಅವರು ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಜೊತೆ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ಈ ಫೋಟೋ ನೋಡಿದ ಅನೇಕರು ‘ಹ್ಯಾಪಿ ಫ್ಯಾಮಿಲಿ’ ಎಂದು ಕಮೆಂಟ್ ಮಾಡುತ್ತಾ ಇದ್ದಾರೆ.
ದರ್ಶನ್ ಅವರು ಮಗ ವಿನೀಶ್ ಹಾಗೂ ಸಹೋದರ ದಿನಕರ್ ಜೊತೆ ಪೋಸ್ ಕೊಟ್ಟಿದ್ದಾರೆ. ಅಣ್ಣ-ತಮ್ಮನ ಒಂದೇ ಫ್ರೇಮ್ನಲ್ಲಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
‘ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ. ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ’ ಎಂದು ದರ್ಶನ್ ಅವರು ಅಭಿಮಾನಿಗಳಿಗೆ ಸಂಕ್ರಾಂತಿಯ ಶುಭಾಶಯ ತಿಳಿಸಿದ್ದಾರೆ.