ಮಂಡ್ಯ:- ಜಿಲ್ಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.
ಒಂದು ಚಮಚ ಜೇನುತುಪ್ಪ ಸೇವಿಸಿದರೆ ಸಿಗುತ್ತೆ ಹಲವು ಆರೋಗ್ಯಕರ ಲಾಭಗಳು..!
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುವ ಸಂಬಂಧ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
*ಹಾಜರಾತಿ ಕಡ್ಡಾಯ* ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಇದು ಕನ್ನಡ ತಾಯಿಯ ಹಬ್ಬವಾಗಿದ್ದು, ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಕಾರ್ಯಕ್ರಮದ ಕೆಲಸಗಳು ಸುಸೂತ್ರವಾಗಿ ನಡೆಸಲು ಸ್ವಾಗತ ಸಮಿತಿ, ವೇದಿಕೆ ಸಮಿತಿ, ಪೆರೇಡ್ ಸಮಿತಿ, ಸಾಂಸ್ಕೃತಿಕ ಸಮಿತಿ, ಮೆರವಣಿಗೆ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿಗಳನ್ನು ವಹಿಸಿದರು.
ಸ್ವಾಗತ ಸಮಿತಿಯು ತಪ್ಪದಂತೆ ಕನ್ನಡಪರ ಸಂಘ ಸಂಸ್ಥೆ ಹಾಗೂ ಸಂಘಟನೆಗಳು, ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡಿ ಅವರನ್ನು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ಚಾನಿಸಿ ಎಂದರು.
*ಪಥ ಸಂಚಲನ* ಪೊಲೀಸ್, ಗೃಹ ರಕ್ಷಕ, ಅಬಕಾರಿ, ಎನ್.ಸಿ.ಸಿ, ಎನ್.ಎಸ್.ಎಸ್ ಸೇರಿದಂತೆ ಸುಮಾರು 30 ತಂಡಗಳು ಪಥ ಸಂಚಲನ ನೀಡಲು ಪೂರ್ವಾಭ್ಯಸ ನಡೆಸಿ. ಪಥ ಸಂಚಲನ ಉತ್ತಮವಾಗಿ ಮೂಡಿಬರುವಂತೆ ನೋಡಿಕೊಳ್ಳಿ ಎಂದರು
*ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಗೀತೆಗೆ ನೃತ್ಯ* ಜಿಲ್ಲೆಯಲ್ಲಿ ಡಿಸೆಂಬರ್ ಮಾಹೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ನಡೆಯಲಿದೆ. ಸಾಹಿತ್ಯ ಸಮ್ಮೇಳನದ ಕುರಿತ ಗೀತೆಯನ್ನು ಸಿದ್ಧಪಡಿಸಲಾಗುತ್ತಿದ್ದು, ಕನ್ನಡ ರಾಜ್ಯೋತ್ಸವದಲ್ಲಿ ಮಕ್ಕಳಿಂದ ನೃತ್ಯ ಪ್ರದರ್ಶನ ನೀಡಿ ಸಾಹಿತ್ಯ ಸಮ್ಮೇಳನಕ್ಕೆ ಆಹ್ವಾನಿಸಿ ಎಂದರು.
*ಸ್ತಬ್ದ ಚಿತ್ರ ಪ್ರದರ್ಶನ* ಕನ್ನಡ ರಾಜ್ಯೋತ್ಸವದಲ್ಲಿ ಎಲ್ಲಾ ಇಲಾಖೆಗಳಿಂದ ಸಂಬಂಧಿಸಿದ ಸ್ತಬ್ಧ ಚಿತ್ರಗಳನ್ನು ಪ್ರದರ್ಶಿಸಬೇಕು. ಶಿಕ್ಷಣ ಇಲಾಖೆಯು ಕನ್ನಡ ಸಾಹಿತ್ಯದ ಜ್ಞಾನಪೀಠ ಪ್ರಶಸ್ತಿ ವಿಜೇತರ ಸ್ತಬ್ದ ಚಿತ್ರವನ್ನು ಪ್ರದರ್ಶಿಸಬೇಕು ಎಂದು ತಿಳಿಸಿದರು.
*ತಾಯಿ ಭುವನೇಶ್ವರಿ ಪ್ರತಿಮೆಯ ಮೆರವಣಿಗೆ* ನವೆಂವರ್ 1 ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಕ್ರೀಡಾಂಗಣದವರೆಗೆ ತಾಯಿ ಭುವನೇಶ್ವರಿ ಪ್ರತಿಮೆಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ, ಕತ್ತಿವರಸೆ, ಪೂಜಾ ಕುಣಿತ, ತಮಟೆ, ನಗಾರಿ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿ ಮೆರವಣಿಗೆಗೆ ಮೆರಗು ನೀಡಲಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ,
ಕನ್ಬಡ ಸಾಹಿತ್ಯ ಸಮ್ಮೇಳನದ ಸಮನ್ವಯ ಸಮಿತಿ ಆಧ್ಯಕ್ಷೆ ಡಾ: ಮೀರಾ ಶಿವಲಿಂಗಯ್ಯ, ಲೋಕೋಪಯೋಗಿ ಇಲಾಖೆ ಕಾರ್ಯಪಲಕ ಅಭಿಯಂತರ ಹರ್ಷ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.