ದಾವಣಗೆರೆ:- ಜಾತಿ ಗಣತಿ ಹೆಸರಿನಲ್ಲಿ ಸಮಾಜ ಒಡೆಯುವ ಹುನ್ನಾರ ನಡೆಯುತ್ತಿದೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಈ ಸಂಬಂಧ ಮಾತನಾಡಿದ ಅವರು,ಜಾತಿ ಗಣತಿಯು ಪ್ರತಿಯೊಂದು ಸಮುದಾಯಗಳಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಕಾರ್ಯಕ್ರಮಗಳನ್ನು ರೂಪಿಸಲು ಅಗತ್ಯವಾಗಿ ಬೇಕು. ಆದರೆ ಈಗ ಆಗುತ್ತಿರುವುದು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿ ಗಣತಿಯ ಸದ್ದು ಮಾಡುತ್ತಿದೆ. ಇದಕ್ಕೆ ಅವಕಾಶ ನೀಡಬಾರದು. ರಾಜಕಾರಣ ಮಾಡಲು ಹಲವಾರು ಮಾರ್ಗಗಳು ಇವೆ ಎಂದು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಜಾತಿ ಗಣತಿ ಹೆಸರಿನಲ್ಲಿ ಸಮಾಜ ಬೇರ್ಪಡಿಸುವ ಹುನ್ನಾರ ನಡೆಯುತ್ತದೆ. ಜಾತಿ ಗಣತಿ ಬಗ್ಗೆ ಸ್ಪಷ್ಟ ನೀತಿ ಇರಬೇಕು. ಈಗ ಕರ್ನಾಟಕದಲ್ಲಿ ಜಾತಿ ಗಣತಿ ನಡೆದಿದೆ, ಅದು ಜಾತಿ ಗಣತಿಯಲ್ಲ. ಯಾವ್ಯಾವ ಸನುದಾಯದಲ್ಲಿ ಶಿಕ್ಷಣ, ಆರ್ಥಿಕ, ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ವರದಿ ತಯಾರಿ ಮಾಡಲಾಗಿದೆ. ಆದರೆ ಅದನ್ನೇ ಜಾತಿ ಗಣತಿ ಎಂದು ಆದೇಶ ಹೊರಡಿಸಲು ಸರ್ಕಾರ ಮುಂದಾಗಿದೆ. ಜಾತಿ ಗಣತಿ ಮಾಡಲು ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ ಎಂದು ಸುಪ್ರೀಂ ಕೋಟ್೯ ಹಲವಾರು ಬಾರಿ ಪ್ರಸ್ತಾಪ ಮಾಡಿದೆ ಎಂದರು.