ಬೆಂಗಳೂರು :- ರಾಜ್ಯದ 2 ಮಹಿಳಾ ಐಎಎಸ್ ಅಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಪ್ರಶಸ್ತಿ ಘೋಷಣೆ ಮಾಡಿದೆ.
ಚಿತ್ರದುರ್ಗ ಡಿಸಿ ದಿವ್ಯಾ ಪ್ರಭುಗೆ ಮತ್ತು ಅತ್ಯುತ್ತಮ ಕಾರ್ಯನಿರ್ವಹಿಸಿದ ಇಲಾಖೆ ವರ್ಗದಡಿ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾಗೆ ಪ್ರಶಸ್ತಿ ನೀಡಲಾಗಿದೆ.
ದಿವ್ಯಾ ಪ್ರಭು ಅವರಿಗೆ ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಯುವ ಮತದಾರರ ನೋಂದಣಿ, ವಿಶೇಷ ಮತದಾರರ ನೋಂದಣಿ ಹೆಚ್ಚಳ ಸೇರಿದಂತೆ ಚುನಾವಣೆಯಲ್ಲಿ ನಿರ್ವಹಿಸಿದ ಕಾರ್ಯಗಳಿಗೆ ಪ್ರಶಸ್ತಿ ನೀಡಲಾಗುತ್ತಿದೆ.
ಶಿಖಾ ಅವರಿಗೆ 2023ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಆಯುಕ್ತರಾಗಿ ಇಲಾಖೆಯ ಮೂಲಕ ಮತದಾರರಲ್ಲಿ ಉಚಿತ ಉಡುಗೊರೆಗಳ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ, ವಾಣಿಜ್ಯ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತಿ ಪಾಲನೆ ಸೇರಿದಂತೆ ಕಟ್ಟುನಿಟ್ಟಿನ ಚುನಾವಣೆ ನಡೆಸಲು ಪ್ರಮುಖ ಪಾತ್ರವಹಿಸಿದ್ದಕ್ಕಾಗಿ ಪ್ರಶಸ್ತಿ ನೀಡಲಾಗುತ್ತಿದೆ.