ದಾವಣಗೆರೆ: ಮುಂಬರುವ 2024ರ ಲೋಕಸಭೆ ಚುನಾವಣೆಗೆ ನಾವು ಕೂಡ ಭರ್ಜರಿಯಾಗಿ ತಯಾರಿಯನ್ನ ನಡೆಸಿದ್ದು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಧೂಳಿಪಟವಾಗಲಿದೆ ಎಂದು ಬಿಜೆಪಿ ವಿರುದ್ದ ಸಚಿವ ಈಶ್ವರ್ ಖಂಡ್ರೆ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಟಿಕೆಟ್ ಆಕಾಂಕ್ಷಿಗಳು ಮತ್ತು ಮುಂಚೂಣಿ ಮುಖಂಡರ ಸಭೆಯನ್ನ ಕರೆಯಲಾಗಿತ್ತು. ಸಭೆಗೆ ಆಗಮಿಸಿದ್ದ ಸಚಿವ ಈಶ್ವರ ಖಂಡ್ರೆ ಬಿಜೆಪಿ ವಿರುದ್ಧ ಹರಿಹಾಯ್ದರು.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಈ ಬಾರಿ ಮಳೆಯ ಕೊರತೆಯಿಂದ ಇಡೀ ರಾಜ್ಯವೇ ಬರದಿಂದ ತತ್ತರಿಸಿ ಹೋಗಿದೆ. ಮುಂಗಾರು ಸಂಪೂರ್ಣ ನಷ್ಟವಾಗಿದ್ದು, ಹಿಂಗಾರು ನಷ್ಟವಾಗುವ ಲಕ್ಷಣಗಳಿವೆ. ಬರದಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಬರ ಪರಿಹಾರದ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರದ ಪ್ರಸ್ತಾವನೆ ಕಳಿಸಿದ್ದೇವೆ. ಆದರೆ, ಕೇಂದ್ರ ಸರ್ಕಾರ ಈವರೆಗೂ ನಯಾ ಪೈಸೆ ಹಣವನ್ನ ಬಿಡುಗಡೆ ಮಾಡಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ರಾಜ್ಯದ ಮೇಲೆ ಪ್ರಹಾರದ ಮೇಲೆ ಪ್ರಹಾರ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.