ಬೆಳಗಾವಿ:-ಮಹಾತ್ಮಾ ಗಾಂಧಿ ಅವರು ಶತಮಾನದ ಹಿಂದೆ ಅಧ್ಯಕ್ಷತೆ ವಹಿಸಿದ್ದ ಏಕೈಕ ಕಾಂಗ್ರೆಸ್ ಅಧಿವೇಶನವನ್ನು ಸ್ಮರಣೀಯಗೊಳಿಸಲು ಕರ್ನಾಟಕದ ಗಡಿ ಜಿಲ್ಲೆ, ಕುಂದಾ ನಗರಿ ಬೆಳಗಾವಿ ಸಜ್ಜುಗೊಂಡಿದೆ. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಈ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ಯೋಜಿಸಿದ್ದು, ಇಡೀ ನಗರ ಮೈಸೂರು ದಸರಾದಂತೆ ಕಂಗೊಳಿಸುತ್ತಿದೆ.
ಮೊಟ್ಟೆ ಏಟಿಗೆ ತಲೆ ಪೆಟ್ಟು: ಆಸ್ಪತ್ರೆಯಿಂದ ಬಿಜೆಪಿ ಶಾಸಕ ಮುನಿರತ್ನ ಡಿಸ್ಚಾರ್ಜ್!
ಹೀಗಾಗಿ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಶತಮಾನದ ಸಂಭ್ರಮ ಮನೆ ಮಾಡಿದ್ದು, ಐತಿಹಾಸಿಕ ಕ್ಷಣಕ್ಕೆ ಕುಂದಾನಗರಿ ಸಾಕ್ಷಿ ಆಗುತ್ತಿದೆ.
1924ರ ಡಿಸೆಂಬರ್ 26 ಹಾಗೂ 27ರಂದು ಮಹಾತ್ಮ ಗಾಂಧೀಜಿ ಬೆಳಗಾವಿ ಭೇಟಿ ನೀಡಿ, ಕಾಂಗ್ರೆಸ್ ಅಧಿವೇಶದಲ್ಲಿ ಭಾಗಿಯಾಗಿದ್ದರು. ಈ ಅಧಿವೇಶನಕ್ಕೆ 100 ವರ್ಷಗಳಾದ ಹಿನ್ನಲೆ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಶತಮಾನೋತ್ಸವ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಣೆ ಮಾಡುತ್ತಿದೆ.
ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದೇಶದ ವಿವಿಧೆಡೆಯಿಂದ ಕಾಂಗ್ರೆಸ್ ನಾಯಕರ ದಂಡೇ ಬರತೊಡಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಪ್ರಮುಖರು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಹಿಮಾಚಲ ಪ್ರದೇಶ ಮುಖ್ಯ ಮಂತ್ರಿ ಸುಖ್ವಿಂದರ್ ಸಿಂಗ್ ಸುಕ್ಕು, ಮಾಜಿ ಕೇಂದ್ರ ಸಚಿವ ಶಶಿ ತರೂರ್, ಕಾಂಗ್ರೆಸ್ ಯುವ ನಾಯಕ ಕನ್ನಯ್ಯಾ ಕುಮಾರ ಗುರುವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸಿದರು.
ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ನೇತೃತ್ವ ತಂಡದಿಂದ ಮುಖಂಡರುಗಳಿಗೆ ಸ್ವಾಗತ ಕೋರಲಾಯಿತು. ಲಂಬಾಣಿ ಹಾಡು ನೃತ್ಯದ ಮೂಲಕ ಯುವತಿಯರಿಂದ ಸ್ವಾಗತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಪ್ರಯುಕ್ತ ಬೆಳಗಾವಿ ನಗರದೆಲ್ಲೆಡೆ ಕಾಂಗ್ರೆಸ್ ಬಾವುಟ, ನಾಯಕರ ಕಟೌಟ್ ರಾರಾಜಿಸುತ್ತಿವೆ.
ಇನ್ನೂ ಕರ್ನಾಟಕದ ಖಾದಿ ಭಗೀರಥ ಎಂದು ಕರೆಯಲ್ಪಡುವ ಬೆಳಗಾವಿಯ ಗಂಗಾಧರರಾವ್ ದೇಶಪಾಂಡೆ ಅವರು 1924ರ ಕಾಂಗ್ರೆಸ್ ಅಧಿವೇಶನದ ಪ್ರಮುಖ ಆಯೋಜಕರು ಮತ್ತು ಸ್ವಾಗತಿ ಸಮಿತಿ ಅಧ್ಯಕ್ಷರಾಗಿದ್ದರು. ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವನ್ನು ಆಯೋಜಿಸುವಲ್ಲಿ ದೇಶಪಾಂಡೆ ಪ್ರಮುಖ ಪಾತ್ರ ವಹಿಸಿದ್ದರು.