ನವದೆಹಲಿ: ಭಾರತದ ಒಳಗೆ ಮತ್ತು ಹೊರಗೆ, ಕೆಲವು ಶಕ್ತಿಗಳು ತಮ್ಮ ರಾಜಕೀಯ ಉದ್ದೇಶಕ್ಕಾಗಿ ರಾಷ್ಟ್ರೀಯ ಭದ್ರತೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿವೆ. ಆದ್ದರಿಂದ ನಾವು ನಗರ ನಕ್ಸಲರನ್ನು ಗುರುತಿಸಿ, ಅವರ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.
ಗುಜರಾತ್ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಅವರು ಮಾತನಾಡಿದರು. ರಾಷ್ಟ್ರೀಯ ಏಕತೆಗೆ ಕರೆ ನೀಡಿದ ಪ್ರಧಾನಿ ಮೋದಿ, ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವಲ್ಲಿ ಅದರ ಮೌಲ್ಯವನ್ನು ಒತ್ತಿ ಹೇಳಿದರು.
ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆ ಮಾಡ್ತೀರಾ? ಹಾಗಾದ್ರೆ ಈ ಕಾಯಿಲೆಗಳು ಬರುವ ಸಾಧ್ಯತೆ
ಬಳಿಕ ಮಾತನಾಡುತ್ತಾ, ʻರಾಷ್ಟ್ರೀಯ ಏಕತಾ ದಿವಸ್’ ಹಾಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಪ್ರಪಂಚದ ಹಲವಾರು ದೇಶಗಳಲ್ಲಿ ದೀಪಾವಳಿ ಆಚರಿಸಲಾಗುತ್ತಿದೆ. ಈ ಹಬ್ಬವು ಭಾರತವನ್ನು ಇಡೀ ವಿಶ್ವದೊಂದಿಗೆ ಜೋಡಿಸಿದೆ. ದೇಶಗಳಲ್ಲಿ ಇದನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಲಾಗುತ್ತಿದೆ. ಈ ಹೊತ್ತಿನಲ್ಲೇ ಏಕತಾ ದಿವಸ್ ಆಚರಣೆ ಮಾಡುತ್ತಿರುವುದು ವಿಶಿಷ್ಟ ಸಂಗತಿ ಎಂದು ಶ್ಲಾಘಿಸಿದರು.
ಭಾರತದ ಆರ್ಥಿಕ ಹಿತಾಸಕ್ತಿಗಳಿಗೆ ಹಾನಿ ಮಾಡುವತ್ತ ಕೆಲ ಶಕ್ತಿಗಳು ಗಮನಹರಿಸಿವೆ. ಅಲ್ಲದೇ ವಿಶ್ವದಾದ್ಯಂತ ಭಾರತದ ಬಗ್ಗೆ ತಪ್ಪು ಸಂದೇಶ ಹರಡಲು ಬಯಸುತ್ತಿದ್ದಾರೆ. ಸಶಸ್ತ್ರ ಪಡೆಗಳಲ್ಲಿ ಪ್ರತ್ಯೇಕತಾವಾದವನ್ನು ಪ್ರಚೋದಿಸುವ ಗುರಿ ಹೊಂದಿದ್ದಾರೆ. ಜೊತೆಗೆ ಜಾತಿ, ಸಮುದಾಯಗಳ ಹೆಸರಿನಲ್ಲಿ ದೇಶವನ್ನು ಒಡೆಯುವ ಕೆಲಸದಲ್ಲಿ ತೊಡಗಿದ್ದಾರೆ. ಭಾರತೀಯ ಸಮಾಜ ಮತ್ತು ಅದರ ಏಕತೆಯನ್ನು ದುರ್ಬಲಗೊಳಿಸುವುದು ಅವರ ಏಕೈಕ ಉದ್ದೇಶವಾಗಿದೆ ಎಂದು ಕಿಡಿಕಾರಿದರು.